51 ಎಸೆತಗಳಲ್ಲಿ ಶತಕ ಪೂರೈಸಿ ಹೊಸ ದಾಖಲೆ ಬರೆದ ಮ್ಯಾಕ್ಸ್ ವೆಲ್

51 ಎಸೆತಗಳಲ್ಲಿ ಶತಕ ಪೂರೈಸಿ ಹೊಸ ದಾಖಲೆ ಬರೆದ ಮ್ಯಾಕ್ಸ್ ವೆಲ್

2015 ರ ವಿಶ್ವ ಕಪ್ ನಲ್ಲಿ ಅತಿ ವೇಗದ ಮತ್ತೊಂದು ಶತಕ ದಾಖಲಾಗಿದೆ. ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್ ವೆಲ್, ಶ್ರೀಲಂಕಾ ವಿರುದ್ದ ಸಿಡ್ನಿಯಲ್ಲಿ ಇಂದು ನಡೆದ ಪಂದ್ಯದಲ್ಲಿ ಕೇವಲ 51 ಎಸೆತಗಳಲ್ಲಿ ಶತಕ ಪೂರೈಸಿ ಹೊಸ ದಾಖಲೆ ಬರೆದಿದ್ದಾರೆ.

ಪ್ರಸಕ್ತ ಋತುವಿನಲ್ಲಿ ದಕ್ಷಿಣ ಅಫ್ರಿಕಾ ತಂಡದ ನಾಯಕ ಎಬಿ ಡಿವಿಲಿಯರ್ಸ್, ವೆಸ್ಟ್ ಇಂಡೀಸ್ ವಿರುದ್ದದ ಪಂದ್ಯದಲ್ಲಿ 52 ಎಸೆತಗಳಲ್ಲಿ ಶತಕ ಬಾರಿಸಿ ಮಾಡಿದ್ದ ದಾಖಲೆಯನ್ನು ಗ್ಲೆನ್ ಮ್ಯಾಕ್ಸ್ ವೆಲ್ ಪುಡಿಗಟ್ಟಿದ್ದಾರೆ.

ಈ ಹಿಂದೆ ಇಂಗ್ಲೆಂಡ್ ವಿರುದ್ದದ ಪಂದ್ಯದಲ್ಲಿ ಐರ್ಲೆಂಡಿನ ಕೆವಿನ್ ಕೇವಲ 50 ಎಸೆತಗಳಲ್ಲಿ ಶತಕ ದಾಖಲಿಸಿದ್ದು, ಇದುವರೆಗಿನ ದಾಖಲೆಯಾಗಿದೆ. ಗ್ಲೆನ್ ಮ್ಯಾಕ್ಸ್ ವೆಲ್ 51 ಎಸೆತಗಳಲ್ಲಿ ಶತಕ ಗಳಿಸಿ ಎರಡನೇ ಸ್ಥಾನದಲ್ಲಿದ್ದರೆ, 52 ಎಸೆತಗಳಲ್ಲಿ ಶತಕ ಗಳಿಸಿದ್ದ ಎಬಿ ಡಿವಿಲಿಯರ್ಸ್ ಮೂರನೇ ಸ್ಥಾನಕ್ಕೆ ನೂಕಲ್ಪಟ್ಟಿದ್ದಾರೆ,

Comments

Popular posts from this blog

IT CALULATION 2023-24(AY)

*ಪೊಲೀಸ್ ಸಬ್-ಇನ್ಸ್ಪೆಕ್ಟರ್( ನಿಸ್ತಂತು)(ಪುರುಷ & ಮಹಿಳಾ) ಹುದ್ದೆಗಳ ಕೀ ಉತ್ತರಗಳು ಪ್ರಕಟ*

SSLC RESULT 2023