Drop


Friday, March 27, 2015

ಭಾರತ ರತ್ನ ಅಟಲ್ ಬಿಹಾರಿ ವಾಜಪೇಯ

ಭಾರತ ರತ್ನ ಅಟಲ್ ಬಿಹಾರಿ ವಾಜಪೇಯ.
Post PSGadyal

ನವದೆಹಲಿ: ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಶುಕ್ರವಾರ 'ಭಾರತರತ್ನ' ಪುರಸ್ಕಾರವನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪ್ರಧಾನ ಮಾಡಿದರು.
ಶುಕ್ರವಾರ ಸಂಜೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ವಾಜಪೇಯಿ ಅವರ ನಿವಾಸಕ್ಕೆ ತೆರಳಿ ಭಾರತ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಈ ಸಮಾರಂಭದಲ್ಲಿ ಪ್ರಧಾನಿ
ನರೇಂದ್ರ ಮೋದಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಹಣಕಾಸು ಸಚಿವ ಅರುಣ್ ಜೇಟ್ಲಿ, ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಸೇರಿದಂತೆ ಸರ್ಕಾರದ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.

ಮಾರ್ಚ್ 31ರಂದು ದಿವಂಗತ ಮದನ್ ಮೋಹನ್ ಮಾಳವೀಯ ಅವರ ಪರವಾಗಿ ಅವರ ಕುಟುಂಬ ಸದಸ್ಯರು ಪುರಸ್ಕಾರ ಸ್ವೀಕರಿಸಲಿದ್ದಾರೆ. ಕೇಂದ್ರ ಸರ್ಕಾರ ಡಿಸೆಂಬರ್ 24ರಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ
ಮತ್ತು ಶಿಕ್ಷಣ ತಜ್ಞರೂ ಆಗಿದ್ದ ಸ್ವಾತಂತ್ರ್ಯ ಹೋರಾಟಗಾರ ದಿವಂಗತ ಮದನ್ ಮೋಹನ್ ಮಾಳವೀಯ (ಮರಣೋತ್ತರ) ಅವರಿಗೆ 'ಭಾರತರತ್ನ' ಪುರಸ್ಕಾರ ಘೋಷಣೆ
ಮಾಡಿತ್ತು.