New procedure implemented to appoint judges of HighCourt and Supreme Court.

ಜಡ್ಜ್ಗಳ ನೇಮಕಕ್ಕೆ ಹೊಸ ವ್ಯವಸೆ

ಉದಯವಾಣಿ, Apr 14, 2015, 3:45 AM IST

ನವದೆಹಲಿ: ಹೈಕೋರ್ಟ್‌ ಮತ್ತು ಸುಪ್ರೀಂಕೋರ್ಟ್‌ನ ನ್ಯಾಯಾಧೀಶರ ನೇಮಕಕ್ಕೆ ಇದ್ದ ಕೊಲಿಜಿಯಂ ವ್ಯವಸ್ಥೆಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರ, ವಿವಾದಿತ ನ್ಯಾಯಾಂಗ ನೇಮಕ ಆಯೋಗವನ್ನು ಜಾರಿಗೊಳಿಸಿ ಅಧಿಸೂಚನೆ ಹೊರಡಿಸಿದೆ. ನ್ಯಾಯಾಧೀಶರ ನೇಮಕ ಆಯೋಗ ಕಾಯ್ದೆ ಸೋಮವಾರದಿಂದಲೇ ಜಾರಿಗೆ ಬಂದಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಜತೆಗೆ ಆಯೋಗಕ್ಕೆ ಸಂವಿಧಾನದ ಮಾನ್ಯತೆ ನೀಡುವ ಸಂವಿಧಾನ ತಿದ್ದುಪಡಿ ಕಾಯ್ದೆಯೂ ಜಾರಿಯಾಗಿದೆ.

ವಿಶೇಷವೆಂದರೆ, ನ್ಯಾಯಾಂಗ ನೇಮಕಾತಿ ಆಯೋಗ ಮಸೂದೆಯನ್ನು ಪ್ರಶ್ನಿಸಿ ವಿವಿಧ ಸಂಘಟನೆಗಳು ಸಲ್ಲಿಸಿರುವ ಅರ್ಜಿ ಬುಧವಾರ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದ್ದು, ಅದಕ್ಕೆ ಎರಡು ದಿನ ಮೊದಲು ಸರ್ಕಾರ ಹೊಸ ವ್ಯವಸ್ಥೆಯನ್ನು ಜಾರಿಗೆ ತರುವ ಅಧಿಸೂಚನೆ ಪ್ರಕಟಿಸಿದೆ.ನೂತನ ಕಾಯ್ದೆ ಜಾರಿಯಾಗುವ ಮೂಲಕ ಕೊಲಿಜಿಯಂ ವ್ಯವಸ್ಥೆಗೆ ಕೊನೆಯ ಮೊಳೆ ಬಿದ್ದಿದೆ. ಆದರೆ, ನೂತನ ವ್ಯವಸ್ಥೆ ಕಾರ್ಯನಿರ್ವಹಿಸಲು ಇನ್ನೂ ಸ್ವಲ್ಪ ಸಮಯ ಹಿಡಿಯಲಿದೆ ಎಂದು ಕಾನೂನು ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ನ್ಯಾಯಾಧೀಶರ ನೇಮಕ ಆಯೋಗಕ್ಕೆ ಇಬ್ಬರು ಪ್ರಮುಖ ವ್ಯಕ್ತಿಗಳನ್ನು ನೇಮಿಸುವ ಸಂಬಂಧ ಪ್ರಧಾನಿ ಮೋದಿ ಅವರು ಸುಪ್ರೀಂಕೋರ್ಟ್‌ನ ಸಿಜೆ ಎಚ್‌.ಎಲ್‌. ದತ್ತು, ಲೋಕಸಭೆಯಲ್ಲಿ ಅತಿದೊಡ್ಡ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಶೀಘ್ರವೇ ಸಭೆ ನಡೆಸಲಿದ್ದಾರೆ.

Comments

Popular posts from this blog

IT CALULATION 2023-24(AY)

*ಪೊಲೀಸ್ ಸಬ್-ಇನ್ಸ್ಪೆಕ್ಟರ್( ನಿಸ್ತಂತು)(ಪುರುಷ & ಮಹಿಳಾ) ಹುದ್ದೆಗಳ ಕೀ ಉತ್ತರಗಳು ಪ್ರಕಟ*

SSLC RESULT 2023