ಎಸ್‌.ಪಿ.ಬಾಲಸುಬ್ರಹ್ಮಣ್ಯಂಗೆ ಹರಿವರಾಸನಂ ಪ್ರಶಸ್ತಿ(PSG)

ಎಸ್‌.ಪಿ.ಬಾಲಸುಬ್ರಹ್ಮಣ್ಯಂಗೆ ಹರಿವರಾಸನಂ ಪ್ರಶಸ್ತಿ
(PSG)
ಎಸ್‌.ಪಿ.ಬಾಲಸುಬ್ರಹ್ಮಣ್ಯಂಗೆ ಹರಿವರಾಸನಂ ಪ್ರಶಸ್ತಿ
ತಿರುವನಂತಪುರ: ಕೇರಳ ಸರಕಾರ ನೀಡುವ ಪ್ರತಿಷ್ಠಿತ ಹರಿವರಾಸನಂ ಪ್ರಶಸ್ತಿ ಈ ಬಾರಿ ಹಿರಿಯ ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯಂಗೆ ಒಲಿದು ಬಂದಿದೆ.

ಜಾತ್ಯತೀತತೆ, ಸಮಾನತೆ ಹಾಗೂ ವಿಶ್ವ ಬ್ರಾತೃತ್ವ ಸಾರುವ ಶಬರಿಮಲೆಯ ಅಯ್ಯಪ್ಪ ಸ್ವಾಮಿಯ ಪ್ರತಿಷ್ಠೆ ಎತ್ತಿ ಹಿಡಿಯುವ ನಿಟ್ಟಿನಲ್ಲಿ ಬಾಲಸುಬ್ರಹ್ಮಣ್ಯಂ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು ಕಳೆದ ಐದು ದಶಕಗಳಲ್ಲಿ ಅವರು ಸಂಗೀತ ಕ್ಷೇತ್ರಕ್ಕೆ ಸಲ್ಲಿಸಿರುವ ಅಮೋಘ ಸೇವೆಯನ್ನು ಪರಿಗಣಿಸಲಾಗಿದೆ.
ಕೆ.ಜಯಕುಮಾರ್‌ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಶಬರಿಮಲೆಯ ಸಮಿತಿ ಎಸ್‌ಪಿಬಿ ಅವರನ್ನು ಈ ವರ್ಷದ ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ಕೇರಳ ಸರಕಾರದ ಆರೋಗ್ಯ ಮತ್ತು ದೇವಸ್ಯಂ ಖಾತೆಯ ಸಚಿವ ವಿ.ಎಸ್‌. ಶಿವಕುಮಾರ್‌ ತಿಳಿಸಿದ್ದಾರೆ.

ಪ್ರಶಸ್ತಿಯು ಒಂದು ಲಕ್ಷ ರೂ. ಬಹುಮಾನ ಮೊತ್ತವನ್ನು ಹೊಂದಿದ್ದು, ಸನ್ಮಾನ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ. ಜೂನ್ ತಿಂಗಳಲ್ಲಿ ಶಬರಿಮಲೆಯಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಕಳೆದ ವರ್ಷಕ್ಕಿಂತ ಮುನ್ನ ಈ ಪ್ರಶಸ್ತಿಯ ಬಹುಮಾನ ಮೊತ್ತ 50 ಸಾವಿರ ರೂ. ಆಗಿತ್ತು. ಈ ವರ್ಷದಿಂದ ಪ್ರಶಸ್ತಿ ಮೊತ್ತವನ್ನು ಏರಿಸಲಾಗಿದೆ ಎಂದು ಸಚಿವರು ಹೇಳಿದರು.

Comments

Popular posts from this blog

IT CALULATION 2023-24(AY)

*ಪೊಲೀಸ್ ಸಬ್-ಇನ್ಸ್ಪೆಕ್ಟರ್( ನಿಸ್ತಂತು)(ಪುರುಷ & ಮಹಿಳಾ) ಹುದ್ದೆಗಳ ಕೀ ಉತ್ತರಗಳು ಪ್ರಕಟ*

SSLC RESULT 2023