ಇಂದು ಮಧ್ಯಾಹ್ನ 2.30ಕ್ಕೆ ಎಸ್ಸೆಸ್ಸೆಲ್ಸಿ ರಿಸಲ್ಟ್ ಪ್ರಕಟ.

ಇಂದು ಮಧ್ಯಾಹ್ನ 2.30ಕ್ಕೆ ಎಸ್ಸೆಸ್ಸೆಲ್ಸಿ ರಿಸಲ್ಟ್ ಪ್ರಕಟ.
(PSGadyal Teacher)

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಸ್ಸೆಸ್ಸೆಲ್ಸಿ ಪರೀಕ್ಷೆ ಫ‌ಲಿತಾಂಶ ಮಂಗಳವಾರ ಪ್ರಕಟಗೊಳ್ಳಲಿದೆ. ಮಧ್ಯಾಹ್ನ 2.30ಕ್ಕೆ ನಗರದ ಮಲ್ಲೇಶ್ವರದಲ್ಲಿರುವ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಪ್ರಕಟಿಸಲಾಗುವುದು. ಫ‌ಲಿತಾಂಶ ಪ್ರಕಟಗೊಂಡ ಕೆಲವೇ ಹೊತ್ತಿನಲ್ಲಿ ಇಲಾಖಾ ವೆಬ್‌ಸೈಟ್‌ಗಳಲ್ಲಿ ವಿದ್ಯಾರ್ಥಿಗಳು ಫ‌ಲಿತಾಂಶ ವೀಕ್ಷಿಸಬಹುದು. ಆದರೆ, ಅಧಿಕೃತವಾಗಿ ವಿದ್ಯಾರ್ಥಿಗಳಿಗೆ ಫ‌ಲಿತಾಂಶ ಬುಧವಾರ ಮಧ್ಯಾಹ್ನ 3.30ಕ್ಕೆ ಆಯಾ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಗಳ ಕಚೇರಿಗಳಲ್ಲಿ ದೊರೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಮೊಹಮ್ಮದ್‌ ಮೊಹ್ಸಿನ್‌ ತಿಳಿಸಿದ್ದಾರೆ.

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ರಾಜ್ಯದಲ್ಲಿ ಒಟ್ಟು 8,56,366 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ಈ ಪೈಕಿ 8,37,433 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಒಟ್ಟಾರೆ ನೋಂದಾಯಿತ ವಿದ್ಯಾರ್ಥಿಗಳಲ್ಲಿ 4.52 ಲಕ್ಷ ಬಾಲಕರು ಹಾಗೂ 4.03 ಬಾಲಕಿಯರಿದ್ದಾರೆ. ಅಲ್ಲದೆ, 16,337 ಖಾಸಗಿ ಮತ್ತು 32,607 ಪುನರಾವರ್ತಿತ ವಿದ್ಯಾರ್ಥಿಗಳೂ ಸೇರಿದ್ದಾರೆ. ಇವರೆಲ್ಲರ ಭವಿಷ್ಯ ಮಂಗಳವಾರ ನಿರ್ಧಾರವಾಗಲಿದೆ.

ಮತ್ತೆ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ?

ಉಡುಪಿ: ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಅಧಿಕೃತವಾಗಿ ಮಂಗಳವಾರ ಪ್ರಕಟವಾಗಲಿದ್ದು ಉಡುಪಿ ಜಿಲ್ಲೆಯಲ್ಲಿ ಶೇ.93.7 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆಂದು ನಂಬಲರ್ಹ ಮೂಲಗಳಿಂದ ತಿಳಿದುಬಂದಿದೆ.

ರಾಜ್ಯದಲ್ಲಿ ಉಡುಪಿ ಜಿಲ್ಲೆಯ ಪ್ರಥಮ ಸ್ಥಾನ ಗಳಿಸಿದರೆ ಕಳೆದ ಕೆಲವು ವರ್ಷಗಳಿಂದ ಮೊದಲ ಸ್ಥಾನದಲ್ಲಿರುತ್ತಿದ್ದ ಚಿಕ್ಕೋಡಿ ದ್ವಿತೀಯ ಸ್ಥಾನವನ್ನು ಗಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆ 8ನೆಯ ಸ್ಥಾನದಲ್ಲಿದೆ ಎನ್ನಲಾಗಿದೆ. ಉಡುಪಿ ಜಿಲ್ಲೆ 2014ರಲ್ಲಿ 16ನೆಯ, 2013ರಲ್ಲಿ 3ನೆಯ ಸ್ಥಾನವನ್ನು ಗಳಿಸಿತ್ತು. 2011ರಲ್ಲಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದಿತ್ತಾದರೂ ಚಿಕ್ಕೋಡಿ ಆ ಸ್ಥಾನ ಗಳಿಸಲು ಆರಂಭಿಸಿದ ಅನಂತರ ಉಡುಪಿ ಜಿಲ್ಲೆ ಕ್ರಮೇಣ ಹಿಂದಕ್ಕೆ ತಳ್ಳಲ್ಪಟ್ಟಿತ್ತು.

ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪಡೆಯಬಹುದಾದ ವೆಬ್‌ಸೈಟ್‌ಗಳು ಹಾಗೂ ಮೊಬೈಲ್‌ ಸಂಖ್ಯೆಗಳ ವಿವರ ಇಲ್ಲಿದೆ

www.kseeb.kar.nic.in
www.indiaresults.com ಅಥವಾ KAR10 ಎಂದು ಟೈಪ್‌ ಮಾಡಿ, ಸ್ಪೇಸ್‌ ಕೊಟ್ಟು 567675
ಅಥವಾ KAR ಎಂದು ಟೈಪ್‌ ಮಾಡಿ, ಸ್ಪೇಸ್‌ ಕೊಟ್ಟು ನೋಂದಣಿ ಸಂಖ್ಯೆ ಟೈಪ್‌ ಮಾಡಿ 56263ಗೆ ಕಳುಹಿಸಬಹುದು. ಮೊ: 98115 54192, 98736 98968.

www.Knowyourresult.com  ಅಥವಾ KR10 ಎಂದು ಟೈಪ್‌ ಮಾಡಿ, ಸ್ಪೇಸ್‌ ಕೊಟ್ಟು 5888 ಮೊ: 83739 14257.

Comments

Popular posts from this blog

IT CALULATION 2023-24(AY)

*ಪೊಲೀಸ್ ಸಬ್-ಇನ್ಸ್ಪೆಕ್ಟರ್( ನಿಸ್ತಂತು)(ಪುರುಷ & ಮಹಿಳಾ) ಹುದ್ದೆಗಳ ಕೀ ಉತ್ತರಗಳು ಪ್ರಕಟ*

SSLC RESULT 2023