Drop


Wednesday, May 13, 2015

ಶಿವಕುಮಾರ ಶ್ರೀಗಳಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ

ಶಿವಕುಮಾರ ಶ್ರೀಗಳಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ (PSGadyal)

ತುಮಕೂರು, ಮೇ 13 : ನಡೆದಾಡುವ ದೇವರು ಎಂದೇ ಪ್ರಸಿದ್ಧಿ ಪಡೆದಿರುವ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಬುಧವಾರ ಪದ್ಮಭೂಷಣ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಜನರು ಪರೋಪಕಾರ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಸ್ವಾಮೀಜಿ ಈ ಸಂದರ್ಭದಲ್ಲಿ ಕರೆ ನೀಡಿದ್ದಾರೆ.

ಕರ್ನಾಟಕ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮೇಶ್ ಸಿದ್ದಗಂಗಾ ಮಠದಲ್ಲಿ ಸ್ವಾಮೀಜಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಜಿಲ್ಲಾಧಿಕಾರಿ ಕೆ.ಎಸ್.ಸತ್ಯಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

[ನೂರೆಂಟು ವಸಂತ ಕಂಡ ತ್ರಿವಿಧ ದಾಸೋಹಿಗೆ ಕೋಟಿ ವಂದನೆ] ಪ್ರಶಸ್ತಿ ಸ್ವೀಕರಿಸಿದ ನಂತರ ಸಂದೇಶ ನೀಡಿದ ಶಿವಕುಮಾರ ಸ್ವಾಮೀಜಿಗಳು, 'ಮನುಷ್ಯನಿಗೆ ಪ್ರಶಸ್ತಿ ಮುಖ್ಯವಲ್ಲ. ಪ್ರಶಸ್ತಿ ಪಡೆಯುವುದರಿಂದ ಘನತೆ, ಗೌರವ ಹೆಚ್ಚಾಗುವುದಿಲ್ಲ. ನಾನೆಂದೂ ಪ್ರಶಸ್ತಿಗಾಗಿ ಆಸೆ ಪಟ್ಟಿಲ್ಲ. ಸರ್ಕಾರ ನೀಡಿರುವ ಪ್ರಶಸ್ತಿಯನ್ನು ಸ್ವೀಕರಿಸಿರುವೆ' ಎಂದು ಹೇಳಿದರು.

[ರಾಷ್ಟ್ರಪತಿಯಿಂದ ಬುಧವಾರ 'ಪದ್ಮ' ಪ್ರಶಸ್ತಿ ಪ್ರದಾನ] 'ಮನುಷ್ಯ ಜೀವನದಲ್ಲಿ ಪರೋಪಕಾರದ ಮನೋಭಾವವನ್ನು ಅಳವಡಿಸಿಕೊಳ್ಳಬೇಕು. ಇದರಿಂದ ಸಮಾಜಕ್ಕೆ ಒಳ್ಳೆಯದಾಗುತ್ತದೆ' ಎಂದು ಸ್ವಾಮೀಜಿ ಹೇಳಿದರು. [ಲೋಕ ಜಂಗಮ: ಸಿದ್ದಗಂಗಾಶ್ರೀ ಸಾಕ್ಷ್ಯಚಿತ್ರ ಲೋಕಾರ್ಪಣೆ] ಏಪ್ರಿಲ್‌ ತಿಂಗಳಿನಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪದ್ಮ ಪ್ರಶಸ್ತಿಗಳನ್ನು ದೆಹಲಿಯಲ್ಲಿ ಪ್ರದಾನ ಮಾಡಿದ್ದರು. 108 ವರ್ಷದ ಶಿವಕುಮಾರ ಸ್ವಾಮಿಗಳು ದೆಹಲಿಗೆ ತೆರಳು ಸಾಧ್ಯವಾಗದ ಕಾರಣ ಸರ್ಕಾರದ ಪರವಾಗಿ ಇಂದು ಮಠದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.