CET 2015: KEY ANSWERS WILL BE RELEASED ON 15th May, Results on 26th May..

ಸಿಇಟಿ-2015 : 15ಕ್ಕೆ ಕೀ ಉತ್ತರ, 26ರಂದು ಫಲಿತಾಂಶ
ಬುಧವಾರ - ಮೇ -13-2015
ಬೆಂಗಳೂರು, ಮೇ 12: ವೈದ್ಯಕೀಯ, ದಂತ ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ವೃತ್ತಿಶಿಕ್ಷಣ ಕೋರ್ಸ್‌ಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದಿಂದ 2015ನೆ ಸಾಲಿನ ಸಾಮಾನ್ಯ ಪ್ರವೇಶ (ಸಿಇಟಿ) ಪರೀಕ್ಷೆ ಮಂಗಳವಾರ ಬೆಂಗಳೂರಿನ 73 ಕೇಂದ್ರಗಳಲ್ಲಿ ನಡೆದಿದ್ದು, 1,57,580 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಬೆಳಗ್ಗೆ 10:30ರಿಂದ 11:50ರ ವರೆಗೆ ಜೀವಶಾಸ್ತ್ರ ಹಾಗೂ ಮಧ್ಯಾಹ್ನ 2:30ರಿಂದ 3:30ರ ವರೆಗೆ ಗಣಿತ ವಿಷಯಕ್ಕೆ ಪರೀಕ್ಷೆ ಜರಗಿದವು. ನಾಳೆ (ಮೇ 13) ಬೆಳಗ್ಗೆ 10:30ರಿಂದ 11:50ರ ವರೆಗೆ ಭೌತಶಾಸ್ತ್ರ ಹಾಗೂ ಮಧ್ಯಾಹ್ನ 2:30ರಿಂದ 3:30ರ ವರೆಗೆ ರಸಾಯನಶಾಸ್ತ್ರ, ಸಂಜೆ 4:45 ರಿಂದ 5:45ರ ವರೆಗೆ ಹೊರನಾಡು ಮತ್ತು ಗಡಿನಾಡು ಕನ್ನಡಿಗರಿಗೆ ಪ್ರವೇಶ ಪರೀಕ್ಷೆ ನಡೆಯಲಿವೆ.
ಸಿಇಟಿ ಪರೀಕ್ಷೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು. ಎಲ್ಲ ಕೇಂದ್ರಗಳಲ್ಲೂ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಪ್ರತಿಯೊಂದು ಪರೀಕ್ಷಾ ಕೇಂದ್ರಕ್ಕೂ ಒಬ್ಬ ಸಹಾಯಕ ಪೊಲೀಸ್ ಆಯುಕ್ತರನ್ನು ವೀಕ್ಷಕರನ್ನಾಗಿ ನೇಮಿಸಲಾಗಿತ್ತು. ಸಿಇಟಿ ಪರೀಕ್ಷೆಯ ತಾತ್ಕಾಲಿಕ ಸರಿ ಉತ್ತರಗಳು ಮೇ 15ರಂದು ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಗೊಳ್ಳಲಿದೆ. ಸರಿ ಉತ್ತರಗಳಿಗೆ ಆಕ್ಷೇಪಣೆ ಯಿದ್ದಲ್ಲಿ ಮೇ 18ರ ಸಂಜೆಯೊಳಗೆ ಇ-ಮೇಲ್ ಕಳುಹಿಸಬಹುದು. ಮೇ 16ರಂದು ಬೆಳಗ್ಗೆ 9 ಗಂಟೆಗೆ ಕೃಷಿ ಸಂಬಂಧಿತ ವಸ್ತು ಉಪಕರಣಗಳ ಗುರುತಿಸುವಿಕೆ ಪರೀಕ್ಷೆ ನಡೆದರೆ ಮೇ 26ರಂದು ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳಲಿದೆ.

Comments

Popular posts from this blog

IT CALULATION 2023-24(AY)

*ಪೊಲೀಸ್ ಸಬ್-ಇನ್ಸ್ಪೆಕ್ಟರ್( ನಿಸ್ತಂತು)(ಪುರುಷ & ಮಹಿಳಾ) ಹುದ್ದೆಗಳ ಕೀ ಉತ್ತರಗಳು ಪ್ರಕಟ*

SSLC RESULT 2023