1401 ಸರ್ಕಾರಿ ವೈದ್ಯರ ನೇಮಕಕ್ಕೆ ಅಧಿಸೂಚನೆ

1401 ಸರ್ಕಾರಿ ವೈದ್ಯರ ನೇಮಕಕ್ಕೆ ಅಧಿಸೂಚನೆ
(PSGadyal Teacher Vijayapur).

ವಿಧಾನಸಭೆ: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ 1401 ವೈದ್ಯರು, ತಜ್ಞ ವೈದ್ಯರು ಮತ್ತು ದಂತವೈದ್ಯರ ನೇಮಕಾತಿಗೆ ಕೆಪಿಎಸ್‌ಸಿ ಅಧಿಸೂಚನೆ ಪ್ರಕಟಿಸಿದೆ. ಗುರುವಾರ ಇಲಾಖಾ ಬೇಡಿಕೆಗಳ ಮೇಲಿನ ಚರ್ಚೆ ಸಂದರ್ಭದಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್‌ ಈ ವಿಷಯ ಪ್ರಕಟಿಸಿದರು. ವೈದ್ಯರ ನೇಮಕಾತಿ ಕುರಿತಂತೆ ಕೆಪಿಎಸ್‌ಸಿ ಅಧಿಸೂಚನೆ ಪ್ರಕಟಿಸಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್‌ 10 ಕೊನೆಯ ದಿನ. ಅರ್ಜಿ ಶುಲ್ಕ ಪಾವತಿಸಲು ಆ. 10 ಕಡೆಯ ದಿನವಾಗಿದೆ ಎಂದು ತಿಳಿಸಿದರು. ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ 983 ತಜ್ಞ ವೈದ್ಯರು, 331 ಎಂಬಿಬಿಎಸ್‌ ವೈದ್ಯರು ಮತ್ತು 87 ದಂತ ವೈದ್ಯ ಹುದ್ದೆಗಳನ್ನು ಕೆಪಿಎಸ್‌ಸಿ ಮೂಲಕ ಭರ್ತಿ ಮಾಡಲಾಗುತ್ತಿದೆ. ಇದಕ್ಕಾಗಿ ವಿಶೇಷ ನೇಮಕಾತಿ ನಿಯಮ ರೂಪಿಸಿ ಕೆಪಿಎಸ್‌ಸಿಗೆ ನೀಡಲಾಗಿದ್ದು, ಅದರಂತೆ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, 2-3 ತಿಂಗಳಲ್ಲಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದರು.

ಪರೀಕ್ಷೆ, ಸಂದರ್ಶನ ಇಲ್ಲ: ಹೊಸ ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಗಳಿಗೆ ಲಿಖೀತ ಪರೀಕ್ಷೆ ಅಥವಾ ಸಂದರ್ಶನ ಇರುವುದಿಲ್ಲ. ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ನೇರ ನೇಮಕಾತಿ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆ ತೇರ್ಗಡೆಯಾಗಲು ನೇಮಕಾತಿ ನಂತರ 2 ವರ್ಷ ಕಾಲಾವಕಾಶ ನೀಡಲಾಗುತ್ತದೆ ಎಂದು ಹೇಳಿದರು.

Comments

Popular posts from this blog

IT CALULATION 2023-24(AY)

*ಪೊಲೀಸ್ ಸಬ್-ಇನ್ಸ್ಪೆಕ್ಟರ್( ನಿಸ್ತಂತು)(ಪುರುಷ & ಮಹಿಳಾ) ಹುದ್ದೆಗಳ ಕೀ ಉತ್ತರಗಳು ಪ್ರಕಟ*

SSLC RESULT 2023