Drop


Tuesday, August 11, 2015

●ಆಧಾರ್ ಕಡ್ಡಾಯವಲ್ಲ : ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಸೂಚನೆ

●ಆಧಾರ್ ಕಡ್ಡಾಯವಲ್ಲ : ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಸೂಚನೆ
@EDUCATIONGKNEWS::

ನವದೆಹಲಿ, ಆ.11-ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲಷ್ಟೆ ಆಧಾರ್ ಬಳಕೆ. ಅದು ಕಡ್ಡಾಯವಲ್ಲ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯ, ಆಧಾರ್‌ನಲ್ಲಿನ ವೈಯಕ್ತಿಕ ಮಾಹಿತಿಗಳನ್ನು ಇತರರೊಂದಿಗೆ ಹಂಚಿಕೊಳ್ಳುವಂತಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.ಖಾಸಗಿತನ ಪ್ರತಿಯೊಬ್ಬನ ಮೂಲಭೂತ ಹಕ್ಕಲ್ಲವೇ ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಪರಿಶೀಲಿಸಿದ ನ್ಯಾಯಾಲಯ, ಅದನ್ನು ಅಂತಿಮ ನಿರ್ಧಾರಕ್ಕಾಗಿ ಮೂವರು ನ್ಯಾಯಾಧೀಶರ ಸಾಂವಿಧಾನಿಕ ವಿಸ್ತೃತ ಪೀಠಕ್ಕೆ ಶಿಫಾರಸುಮಾಡಿತ್ತು.

ಇಂತಹ ಹಲವು ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸಿತ್ತು.ನ್ಯಾಯಮೂರ್ತಿಗಳಾದ ಜೆ.ಚಲ್ಮೇಶ್ವರ್ ನೇತೃತ್ವದ ಪೀಠ, ಈ ಕುರಿತಂತೆ ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ವ್ಯಾಪಕ ಪ್ರಚಾರ ನೀಡಿ, ಆಧಾರ್ ಕಡ್ಡಾಯವಲ್ಲ ಎಂಬುದನ್ನು ಸಾರ್ವಜನಿಕವಾಗಿ ಮನವರಿಕೆ ಮಾಡಿಕೊಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.