Happy Engineers Day on 15th September"


ಮೋಕ್ಷಗುಂಡಂ ವಿಶ್ವೇಶ್ವರಯ್ಯ :
(ಸೆಪ್ಟೆಂಬರ್ ೧೫, ೧೮೬೧ - ಏಪ್ರಿಲ್ ೧೨, ೧೯೬೨)
ಸರ್ ಎಂ.ವಿ. ಎಂದು ಜನಪ್ರಿಯರಾಗಿದ್ದ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ರವರು, ಭಾರತದ ಗಣ್ಯ ಅಭಿಯಂತರರಲ್ಲಿ ಒಬ್ಬರು. ಇವರು ಮೈಸೂರು ಸಂಸ್ಥಾನದ ದಿವಾನರಾಗಿದ್ದವರು. ಭಾರತದಲ್ಲಿ ಇವರ ಜನ್ಮದಿನವನ್ನು 'ಇಂಜಿನಿಯರ್ ಗಳ ದಿನ' ವಾಗಿ ಆಚರಿಸಲಾಗುತ್ತದೆ.

* ಬಾಲ್ಯ, ವಿದ್ಯಾಭ್ಯಾಸ & ವೃತ್ತಿ ಜೀವನ :
ವಿಶ್ವೇಶ್ವರಯ್ಯನವರ ತಂದೆ 'ಶ್ರೀನಿವಾಸ ಶಾಸ್ತ್ರಿ', ತಾಯಿ 'ವೆಂಕಟಲಕ್ಷ್ಮಮ್ಮ'. ವಿಶ್ವೇಶ್ವರಯ್ಯನವರ ತಂದೆ ಸಂಸ್ಕೃತ ವಿದ್ವಾಂಸರು; ಧರ್ಮ ಶಾಸ್ತ್ರಗಳನ್ನು ಆಳವಾಗಿ ಅಭ್ಯಾಸ ಮಾಡಿದ್ದರಲ್ಲದೆ ಆಯುರ್ವೇದ ತಜ್ಞರೂ ಆಗಿದ್ದರು. ವಿಶ್ವೇಶ್ವರಯ್ಯನವರು ಜನಿಸಿದ್ದು ಬೆಂಗಳೂರಿನಿಂದ ೪೦ ಮೈಲಿ ದೂರದಲ್ಲಿರುವ ಮುದ್ದೇನಹಳ್ಳಿಯಲ್ಲಿ. ಅವರು ೧೫ ವರ್ಷದವರಿರುವಾಗಲೆ ತಂದೆಯು ನಿಧನರಾದರು. ವಿಶ್ವೇಶ್ವರಯ್ಯನವರ ಪ್ರಾಥಮಿಕ ಶಿಕ್ಷಣ ಚಿಕ್ಕಬಳ್ಳಾಪುರದಲ್ಲಿ ಮತ್ತು ಪ್ರೌಢ ಶಿಕ್ಷಣ ಬೆಂಗಳೂರಿನಲ್ಲಿ ನಡೆಯಿತು. ೧೮೮೧ ರಲ್ಲಿ ಮದ್ರಾಸು ವಿಶ್ವವಿದ್ಯಾಲಯದಿಂದ ಬಿ.ಎ ಪದವಿಯನ್ನು ಪಡೆದು ನಂತರ ಪುಣೆಯ ವಿಜ್ಞಾನ ಕಾಲೇಜಿನಿಂದ ಸಿವಿಲ್ ಎಂಜಿನಿಯರಿಂಗ್ ಪದವಿಯನ್ನು ಪಡೆದರು.

* ಮೈಸೂರು ರಾಜ್ಯದ ದಿವಾನರಾಗಿ :
೧೯೦೮ರಲ್ಲಿ ಸ್ವಯಂ-ನಿವೃತ್ತಿ ಘೋಷಿಸಿದ ವಿಶ್ವೇಶ್ವರಯ್ಯನವರು ನಂತರ ಮೈಸೂರು ಸಂಸ್ಥಾನದ ದಿವಾನರಾಗಿ ಸೇವೆ ಸಲ್ಲಿಸಿದರು. ಮಹಾರಾಜ ಕೃಷ್ಣರಾಜ ಒಡೆಯರ್ ಅವರ ಜೊತೆ ಮೈಸೂರು ರಾಜ್ಯದ ಸರ್ವತೋಮುಖ ಬೆಳವಣಿಗೆಗೆ ಕೆಲಸ ಮಾಡಿದರು. ೧೯೧೭ ರಲ್ಲಿ ಬೆಂಗಳೂರಿನಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜನ್ನು ಸ್ಥಾಪಿಸಿದರು. ಇದೇ ಕಾಲೇಜಿಗೆ ನಂತರ ಅವರ ಹೆಸರನ್ನೇ ಇಡಲಾಯಿತು (ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್). ಮೈಸೂರು ವಿಶ್ವವಿದ್ಯಾಲಯದ ಬೆಳವಣಿಗೆಗಾಗಿಯೂ ಶ್ರಮಿಸಿದರು.

* ಗೌರವಗಳು :
ವಿಶ್ವೇಶ್ವರಯ್ಯನವರು ದಿವಾನರಾಗಿದ್ದಾಗ ಬ್ರಿಟಿಷ್ ಸರ್ಕಾರ ಅವರಿಗೆ "ಸರ್" ಪದವಿಯನ್ನು ನೀಡಿತು
೧೯೫೫ ರಲ್ಲಿ ಭಾರತ ಸರ್ಕಾರದ ಅತ್ಯುಚ್ಚ ಗೌರವವಾದ ಭಾರತ ರತ್ನ ಲಭಿಸಿತು. ಸರ್. ಎಂ. ವಿಶ್ವೇಶ್ವರಯ್ಯನವರು ಭಾರತ ರತ್ನ ಪ್ರಶಸ್ತಿ ಪಡೆದ ಮೊದಲ ಕನ್ನಡಿಗರು.
ಈಗ ಕರ್ನಾಟಕದಲ್ಲಿ ಹೆಚ್ಚಿನ ಶಾಲಾ ಕಾಲೇಜುಗಳು, ಐ.ಟಿ.ಐ, ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಕಾಲೇಜುಗಳಿಗೆ ಇವರ ಹೆಸರಿಟ್ಟು ಗೌರವಿಸಲಾಗಿದೆ.

* ಪುಸ್ತಕಗಳು :
(೧) Memoirs of my working life (ನನ್ನ ವೃತ್ತಿ ಜೀವನದ ನೆನಪುಗಳು - ಕನ್ನಡಕ್ಕೆ ಡಾ. ಗಜಾನನ ಶರ್ಮ)
(೨) Reconstructing India
🌹🌹🌹🌹🌹🌹🌹🌹

Comments

Popular posts from this blog

IT CALULATION 2023-24(AY)

*ಪೊಲೀಸ್ ಸಬ್-ಇನ್ಸ್ಪೆಕ್ಟರ್( ನಿಸ್ತಂತು)(ಪುರುಷ & ಮಹಿಳಾ) ಹುದ್ದೆಗಳ ಕೀ ಉತ್ತರಗಳು ಪ್ರಕಟ*

SSLC RESULT 2023