Monday, November 16, 2015

ಗ್ರಂಥಾಲಯ ಇಲಾಖೆಯ 477 ಹುದ್ದೆಗಳನ್ನು ಭರ್ತಿಗೆ ಕ್ರಮ:

ಹೈದರಾಬಾದ್ ಕರ್ನಾಟಕ ಭಾಗದ 87 ಹುದ್ದೆ ಸಹಿತ, ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಖಾಲಿ ಇರುವ 477 ವಿವಿಧ ಹುದ್ದೆಗಳಿಗೆ ಶೀಘ್ರ ನೇಮಕಾತಿ ನಡೆಯಲಿದೆ ಎಂದು ಇಲಾಖೆ ನಿರ್ದೇಶಕ ಡಾ.ಸತೀಶ್ ಎಸ್.ಹೊಸಮನಿ ತಿಳಿಸಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈ-ಕ ಭಾಗದ 6 ಜಿಲ್ಲೆಗಳ ಅರ್ಜಿಗಳು ಈಗಾಗಲೇ ಸ್ವೀಕೃತವಾಗಿದ್ದು, ಇನ್ನುಳಿದ ಜಿಲ್ಲೆಗಳಲ್ಲಿ ಖಾಲಿ ಇರುವ ಇಲಾಖೆ ಉಪ ನಿರ್ದೇಶಕರ ಹುದ್ದೆ ಸೇರಿ ವಿವಿಧ 390 ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯಲಿದೆ ಎಂದರು. 5,766 ಗ್ರಾಪಂ ಕೇಂದ್ರ ಗ್ರಂಥಾಲಯ ಮೇಲ್ವಿಚಾರಕರ ಸೇವೆ ಕಾಯಂಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ಕೊಳಚೆ ಪ್ರದೇಶ,
ಅಲೆಮಾರಿ ಗ್ರಂಥಾಲಯಗಳ ಮೇಲ್ವಿಚಾರಕರ ವೇತನವನ್ನು 5,500 ರೂ.ಗೆ ಹೆಚ್ಚಿಸಲಾಗುವುದು. ಹಣಕಾಸು ಇಲಾಖೆ ಅನುಮೋದನೆ ನಿರೀಕ್ಷಿಸಲಾಗಿದೆ. ಹೈ-ಕ ಭಾಗದ 250 ಗ್ರಂಥಾಲಯಗಳನ್ನು 50 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲೀಕರಣಗೊಳಿಸಲಾಗುತ್ತಿದ್ದು, 25 ಕೋಟಿ ರೂ. ವೆಚ್ಚದಲ್ಲಿ ಕಂಪ್ಯೂಟರ್ ಮತ್ತಿತರ ಎಲೆಕ್ಟ್ರಾನಿಕ್ ವಸ್ತು ಖರೀದಿಸಲಾಗುವುದು. ಪ್ರತಿ ಗ್ರಂಥಾಲಯಕ್ಕೆ 10 ಲಕ್ಷ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗುವುದು ಎಂದರು.