ಚಿಕ್ಕಬಳ್ಳಾಪುರ : ಕಂದಾಯ ಇಲಾಖೆಯಲ್ಲಿ ಗ್ರಾಮಲೆಕ್ಕಾಧಿಕಾರಿ (೨೩ ಹುದ್ದೆ)ಕೆಲಸ ಖಾಲಿ ಇವೆ::*


ಡಿಸೆಂಬರ್ 03 : ಚಿಕ್ಕಬಳ್ಳಾಪುರ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನುಆಹ್ವಾನಿಸಲಾಗಿದೆ.

ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 31, 2015.ಕರ್ನಾಟಕನಾಗರೀಕ ಸೇವೆಗಳು ನಿಯಮಗಳು 2008ರ ನಿಯಮ 2ರ ಅನ್ವಯ 23 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆನ್‌ಲೈನ್ ಮೂಲಕ ಸಲ್ಲಿಸುವ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುತ್ತದೆ ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ವಿದ್ಯಾರ್ಹತೆ: ಪಿಯುಸಿ ಅಥವ 12 ನೇ ತರಗತಿ ಪರೀಕ್ಷೆಯಲ್ಲಿ (ಸಿಬಿಎಸ್‌ಇ/ಐಸಿಎಸ್‌ಇ) ಉತ್ತೀರ್ಣರಾಗಿರಬೇಕು. ಕನ್ನಡ ಮತ್ತು ಆಂಗ್ಲಭಾಷೆಯ ಗಣಕಯಂತ್ರ ನಿರ್ವಹಣೆ ಬಗ್ಗೆ ಪ್ರಮಾಣ ಪತ್ರಗಳನ್ನು ಹೊಂದಿರಬೇಕು. ಯಾವುದೇ ತತ್ಸಮಾನ ವಿದ್ಯಾರ್ಹತೆ ಅಥವ ಮುಕ್ತ ವಿಶ್ವವಿದ್ಯಾಲಯದಿಂದ ನೀಡಿದ ಪ್ರಮಾಣ ಪತ್ರ ಪರಿಗಣಿಸಲಾಗುವುದಿಲ್ಲ.

ವಯೋಮಿತಿ: ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ, 2ಎ/2ಬಿ/3ಎ/3ಬಿ ಪ್ರವರ್ಗದವರಿಗೆ 38 ವರ್ಷ,ಪ.ಜಾ/ಪ.ಪಂ/ಪ್ರವರ್ಗ - 1 ರ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

http://cbpur-va.kar.nic.in/

ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ನಂತರ ದೊರೆಯುವ ಚಲನ್‌ ದ್ವಿಪ್ರತಿಗಳನ್ನು ತೆಗೆದುಕೊಂಡು ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಶುಲ್ಕವನ್ನು ಜಿಲ್ಲಾಧಿಕಾರಿಗಳು, ಚಿಕ್ಕಬಳ್ಳಾಪುರ ಜಿಲ್ಲೆ ಅವರ ಖಾತೆಗೆ ಪಾವತಿಯಾಗುವಂತೆ ಸಲ್ಲಿಸಬೇಕು.

ಬ್ಯಾಂಕ್ ವಿವರ: ಸ್ಟೇಟ್ ಬ್ಯಾಂಕ್ ಮೈಸೂರು, ಚಿಕ್ಕಬಳ್ಳಾಪುರ. ಖಾತೆ ಸಂಖ್ಯೆ : 64030323576, ಐಎಫ್‌ಎಸ್‌ಸಿ ಕೋಡ್ SBMY0040082. ಅರ್ಜಿ ಶುಲ್ಕಗಳು : ಪ.ಜಾ/ಪ.ಪಂ/ಪ್ರವರ್ಗ - 1/ಮಹಿಳಾ ಅಭ್ಯರ್ಥಿಗಳು 100 ರೂ

Comments

Popular posts from this blog

IT CALULATION 2023-24(AY)

*ಪೊಲೀಸ್ ಸಬ್-ಇನ್ಸ್ಪೆಕ್ಟರ್( ನಿಸ್ತಂತು)(ಪುರುಷ & ಮಹಿಳಾ) ಹುದ್ದೆಗಳ ಕೀ ಉತ್ತರಗಳು ಪ್ರಕಟ*

SSLC RESULT 2023