ಸರ್ಕಾರಿ ಶಾಲೆ ಮಕ್ಕಳಿಗಾಗಿ ಸ್ವಲ್ಪ ಓದು, ಸ್ವಲ್ಪ ಮೋಜು..ಎಂಬ ವಿನೂತನ ಯೋಜನೆ


 April 2, 2017  children,
, ಸ್ವಲ್ಪ ಓದು , ಸ್ವಲ್ಪ ಮೋಜು

ಬೆಂಗಳೂರು,ಏ.2- ಎ ಲ್ಲಾ ಮಕ್ಕಳನ್ನೂ ಮೂಲ ವಿಜ್ಞಾನ ಹಾಗೂ ಸ್ಪರ್ಧಾತ್ಮಕ ಯುಗಕ್ಕೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಸ್ವಲ್ಪ ಓದು, ಸ್ವಲ್ಪ ಮೋಜು ಎಂಬ ವಿನೂತನ ಯೋಜನೆಯನ್ನು ಇಲಾಖೆ ಆರಂಭಿಸಿದೆ. 5ರಿಂದ 6ನೇ ತರಗತಿವರೆಗಿನ ಮಕ್ಕಳಿಗೆ ಬೇಸಿಗೆ ರಜೆಯಲ್ಲಿ ಭಾಷೆ, ಗಣಿತ, ವಿಜ್ಞಾನ ಸೇರಿದಂತೆ ಮತ್ತಿತರ ವಿಷಯಗಳಲ್ಲಿ ತರಬೇತಿ ನೀಡುವುದಕ್ಕಾಗಿ ಈ ಯೋಜನೆಯನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಆಯೋಜಿಸಿದೆ. ಏಪ್ರಿಲ್ ತಿಂಗಳ ಮೊದಲ ವಾರದಿಂದ ಮೇ ತಿಂಗಳ ಕೊನೆಯ ವಾರದವರೆಗೂ ಈ ಶಿಬಿರ ರಾಜ್ಯದ ಎಲ್ಲ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪ್ರಾರಂಭವಾಗಲಿದ್ದು, ಭಾಗವಹಿಸುವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟವನ್ನು ನೀಡಲಾಗುವುದು.
ವಿಶೇಷವಾಗಿ ಬರಪೀಡಿತ ತಾಲ್ಲೂಕುಗಳಲ್ಲಿ ಇದಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಬೇಸಿಗೆ ಸಂದರ್ಭದಲ್ಲಿ ಮಕ್ಕಳು ಸಮಯವನ್ನು ವ್ಯರ್ಥ ಮಾಡದೆ ಜ್ಞಾನವೃದ್ದಿಸಿಕೊಳ್ಳಲು ಸರ್ಕಾರ ಇಂತಹ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಸಾಮಾನ್ಯವಾಗಿ ಬೇಸಿಗೆ ದಿನಗಳಲ್ಲಿ ಮಕ್ಕಳು ಆಟಗಳಲ್ಲೇ ಹೆಚ್ಚು ಆಸಕ್ತಿ ವಹಿಸುತ್ತಿದ್ದರು. ಇದರಿಂದ ಅವರ ವಿದ್ಯಾಭ್ಯಾಸ ಕುಂಠಿತವಾಗುತ್ತಿತ್ತು. ಅಲ್ಲದೆ ಖಾಸಗಿ ಶಾಲೆಗಳು ಕೆಲವೇ ದಿನಗಳು ಮಾತ್ರ ರಜೆ ನೀಡಿ ಮಕ್ಕಳಿಗೆ ಬೇಸಿಗೆ ಶಿಬಿರವನ್ನು ಆಯೋಜಿಸುತ್ತಿದ್ದರು.
ಸರ್ಕಾರಿ ಶಾಲೆಗಳಲ್ಲಿ ಕೂಡ ಬೇಸಿಗೆ ಶಿಬಿರವನ್ನು ಆಯೋಜಿಸುವಂತೆ ಶಿಕ್ಷಕರ ಮೇಲೆ ಪೊಷಕರು ಒತ್ತಡ ಹಾಕಿದ್ದರು. ಇದನ್ನು ಸಕಾರಾತ್ಮಕವಾಗಿ ಪರಿಗಣಿಸಿದ ಇಲಾಖೆ ಮೊಟ್ಟ ಮೊದಲ ಬಾರಿಗೆ ಸ್ವಲ್ಪ ಓದು, ಸ್ವಲ್ಪ ಮೋಜು ಎಂಬ ಶಿಬಿರವನ್ನು ಆಯೋಜಿಸಿದೆ. 4ನೇ ತರಗತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗಾಗಿ ಶಿಕ್ಷಕರು ವಿಶೇಷ ತರಗತಿಗಳನ್ನು ಆಯೋಜಿಸಬೇಕು. ಮೂಲವಿಜ್ಞಾನ, ಗಣಿತ, ಬಾಹ್ಯಾಕಾಶ, ಕೌಶಲ್ಯಾಭಿವೃದ್ದಿ ಮತ್ತಿತರ ಚುಟವಟಿಕೆಗಳ ಬಗ್ಗೆ ವಿದ್ಯಾರ್ಥಿಗಳನ್ನು ಉತ್ತೇಜಿಸಬೇಕು. ಶಿಬಿರದಲ್ಲಿ ಭಾಗವಹಿಸುವ ಶಿಕ್ಷಕರಿಗೆ ವಿಶೇಷ ಭತ್ಯೆಯನ್ನು ಕೂಡ ಸರ್ಕಾರ ನೀಡಲಿದೆ. ಈಗಾಗಲೇ ಈ ಬಗ್ಗೆ ಅಗತ್ಯ ಸಿದ್ದತೆಗಳನ್ನು ಪೂರ್ಣಗೊಳಿಸಲಾಗಿದ್ದು , ಲಕ್ಷಾಂತರ ವಿದ್ಯಾರ್ಥಿಗಳು ಶಿಬಿರದಲ್ಲಿ ಪಾಲ್ಗೊಳ್ಳಲು ಆಸಕ್ತಿ ವಹಿಸಿದ್ದಾರೆ ಎಂದು ಸರ್ವ ಶಿಕ್ಷಣ ಅಭಿಯಾನ ಯೋಜನೆಯ ನಿರ್ದೇಶಕ ಪಿ.ಸಿ.ಜಾಫರ್ ತಿಳಿಸಿದ್ದಾರೆ.

Comments

Popular posts from this blog

IT CALULATION 2023-24(AY)

*ಪೊಲೀಸ್ ಸಬ್-ಇನ್ಸ್ಪೆಕ್ಟರ್( ನಿಸ್ತಂತು)(ಪುರುಷ & ಮಹಿಳಾ) ಹುದ್ದೆಗಳ ಕೀ ಉತ್ತರಗಳು ಪ್ರಕಟ*

SSLC RESULT 2023