Udayavani: ಡಿ.ಇಡಿ, ಡಿ.ಪಿ.ಇಡಿ ಕೋರ್ಸ್‌ಗಳಿಗೆ ದಾಖಲಾತಿ
Jun 13, 2014
ಮಂಗಳೂರು : ಪ್ರಸಕ್ತ 2014 - 15ನೇ ಸಾಲಿನಲ್ಲಿ ಡಿ.ಇಡಿ, ಡಿ.ಪಿ.ಇಡಿ ಕೋರ್ಸ್‌ಗಳ ವ್ಯಾಸಂಗಕ್ಕಾಗಿ ರಾಜ್ಯದ ಸರಕಾರಿ ಮತ್ತು ಮಾನ್ಯತೆ ಪಡೆದ ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಕ ತರಬೇತಿ ಸಂಸ್ಥೆಗಳಲ್ಲಿನ ಸರಕಾರಿ ಕೋಟಾದ ಸೀಟುಗಳ ದಾಖಲಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಡಿ.ಇಡಿ ಕೋರ್ಸ್‌ಗೆ ದ್ವಿತೀಯ ಪಿ.ಯು.ಸಿ. ಅಥವಾ 12ನೇ ತರಗತಿ ಪರೀಕ್ಷೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ - 1 ಹಾಗೂ ಅಂಗವಿಕಲ ಅಭ್ಯರ್ಥಿಗಳು ಕನಿಷ್ಠ ಶೇ 45 ಮತ್ತು ಇತರ ಅಭ್ಯರ್ಥಿಗಳು ಕನಿಷ್ಠ ಶೇ. 50 ಅಂಕ ಪಡೆದಿರಬೇಕು. ಡಿ.ಪಿ.ಇಡಿ ಕೋರ್ಸ್‌ಗೆ ಸೇರುವ ಎಲ್ಲ ಅಭ್ಯರ್ಥಿಗಳು ದ್ವಿತೀಯ ಪಿ.ಯು.ಸಿ. ಅಥವಾ 12ನೇ ತರಗತಿ ಪರೀಕ್ಷೆಯಲ್ಲಿ ಕನಿಷ್ಠ ಶೇ. 45 ಅಂಕ ಹಾಗೂ ಶಿಕ್ಷಣ ಇಲಾಖೆ ಅಥವಾ ವಿಶ್ವವಿದ್ಯಾನಿಲಯ ಅಥವಾ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಆಯೋಜಿಸಿರುವ ರಾಜ್ಯ ಅಥವಾ ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿದ ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳು ಕನಿಷ್ಠ ಶೇ. 40 ಅಂಕ ಪಡೆದಿರಬೇಕು.
ಆನ್‌ಲೈನ್ ಮೂಲಕ ಅರ್ಜಿಗಳನ್ನು ಜೂ. 16ರಿಂದ ಜೂನ್ 30ರ ವರೆಗೆ ಸಲ್ಲಿಸಬಹುದು. ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸುವ ವಿಧಾನ, ಅರ್ಹತೆ, ಮೀಸಲಾತಿ ವಿವರಗಳು ಹಾಗೂ ಇತರ ಸೂಚನೆಗಳನ್ನು ವೆಬ್‌ಸೈಟ್ ಡಿಡಿಡಿ.ಖcಜಟಟlಛಿಛucಚಠಿಜಿಟn.kಚr.nಜಿc.ಜಿn ನಲ್ಲಿ ಪ್ರಕಟಿಸಲಾಗಿದೆ. ವೆಬ್‌ಸೈಟ್‌ನಲ್ಲಿನ ಮಾಹಿತಿ ಓದಿಕೊಂಡು ಅರ್ಜಿ ಭರ್ತಿ ಮಾಡಬೇಕು.
Comments
Post a Comment