ನಾಗಪಂಚಮಿ
ಹಿನ್ನಲೆ: ಒಕ್ಕಲಿಗನೊಬ್ಬ ರಂಟೆ ಹೊಡೆಯುತ್ತಿದ್ದಾಗ ಅದರ ಕುಡಕ್ಕೆ ಸಿಕ್ಕು ಹಾವಿನ ಮರಿಗಳೆಲ್ಲ ಸತ್ತು ಹೋದದ್ದರಿಂದ ತಾಯಿ ಹಾವು ರೊಚ್ಚಿಗೆದ್ದು ಅಂದಿನ ರಾತ್ರಿ ಆ ಒಕ್ಕಲಿಗನ ಮನೆಯ ಮಂದಿಯನ್ನೆಲ್ಲ ಕಚ್ಚಿಕೊಂದು ಹಾಕಿದರೂ ಅದರ ರೋಷ ಶಮನವಾಗದೆ ಹೋದಲ್ಲಿ ಅತ್ತೆಯ ಮನೆಯಲ್ಲಿದ್ದ ಆ ಒಕ್ಕಲಿಗನ ಮಗಳನ್ನು ಕೊಲ್ಲಲ್ಲು ಅತ್ತ ಹೊರಟಿತು. ಅದೇ ಹೊತ್ತಿಗೆ ಅತ್ತೆಯ ಮನೆಯಲ್ಲಿದ್ದ ಆ ಒಕ್ಕಲಿಗನ ಮಗಳು ಮಣ್ಣಿನ ಹಾವನ್ನು ಮಾಡಿ ಹಾಲೆರೆಯುತ್ತಿದ್ದ ುದನ್ನು ಕಂಡ ನಾಗಿಣಿಯ ರೊಚ್ಚು ತಕ್ಕಮಟ್ಟಿಗೆ ಶಾಂತವಾಯಿತು. ಅದು ತಾನು ಒಕ್ಕಲಿಗನ ಮನೆಯಲ್ಲಿ ಮಾಡಿದ ಕೇಡನ್ನು ಹೇಳಲು, ಆಕೆ ಬೋರಾಡಿ ಅತ್ತು ತನ್ನ ತವರವರನ್ನೆಲ್ಲ ಬದುಕಿಸೆಂದು ಬೇಡಿಕೊಂಡಳು. ಆ ನಾಗಿಣಿಗೆ ಕರುಣೆ ಹುಟ್ಟಿ ಒಕ್ಕಲಿಗನ ಮನೆಗೆ ಬಂದು ಎಲ್ಲರ ವಿಷವನ್ನು ಮರಳಿ ಹೀರಿ ಬದುಕಿಸಿದ್ದರಿಂದ ಅವರೆಲ್ಲ ನಾಗಿಣಿಯನ್ನು ಪೂಜಿಸುತ್ತ ಬಂದರೆಂಬ ಕಥೆಯಿದೆ. ಅಂದು ಶ್ರಾವಣ ಶುದ್ಧ ಚೌತಿಯಾದ್ದರಿಂದ ಅಂದಿನ ದಿನವನ್ನು ನಾಗ ಚೌತಿ ಎಂಬ ಹೆಸರಿನಿಂದ ಕರೆಯುತ್ತ ಬಂದುದೇ ನಾಗಪೂಜೆಗೆ ಕಾರಣವೆನಿಸಿತು. ಮಗಳ ಈ ಉಪಕಾರದ ದ್ಯೋತಕವಾಗಿಯೇ ಇಂದಿಗೂ ನಾಗಪಂಚಮಿ ಹಬ್ಬಕ್ಕೆ ಮಗಳನ್ನು ತವರಿನವರು ಕರೆತರುವರೆಂದು ಜಾನಪದರು ಹೇಳಿತ್ತಾರೆ. ಮೂರು ದಿನದ ಹಬ್ಬ: ಮನೆ ಮನೆಗಳಲ್ಲಿ ಹಬ್ಬಕ್ಕೆ ಮೊದಲೇ ನಾಗದೇವನ ನೈವೇದ್ಯಕ್ಕೆ ಅರಳು, ಅರಳಿಟ್ಟು, ತಂಬಿಟ್ಟು, ವಿಧವಿಧ ಉಂಡ...