(ನವೆಂಬರ್ ೧೧ , ೧೮೮೮ - ಫೆಬ್ರುವರಿ ೨೨, ೧೯೫೮ ) ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರಾಗಿ, ಭಾರತ ಸರ್ಕಾರದ ಶಿಕ್ಷಣ ಮಂತ್ರಿಗಳಾಗಿ ಪ್ರಸಿದ್ಧರೆನಿಸಿದ್ದಾರೆ. ಅವರ ಜನ್ಮದಿನವಾದ ನವೆಂಬರ್ ೧೧ ದಿನಾಂಕವನ್ನು ಭಾರತದ ರಾಷ್ಟ್ರೀಯ ಶಿಕ್ಷಣ ದಿನವನ್ನಾಗಿ ಆಚರಿಸಲಾಗುತ್ತಿದೆ. *ಜೀವನ: ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಮಹಾತ್ಮಗಾಂಧಿಯವರ ಜೊತೆಗಾರರಾಗಿದ್ದ ಪ್ರಮುಖರಲ್ಲಿ ಮೌಲಾನಾ ಅಬುಲ್ ಕಲಾಂ ಒಬ್ಬರು. ಅವರು ಜನಿಸಿದ್ದು ನವೆಂಬರ್ ೧೧, ೧೮೮೮ರಲ್ಲಿ. *ಉರ್ದು ವಿದ್ವಾಂಸರು: ಉರ್ದು ವಿದ್ವಾಂಸರಾಗಿದ್ದ ಅವರು ತಮ್ಮ ಬರವಣಿಗೆಗಾಗಿ 'ಆಜಾದ್' ಎಂಬ ನಾಮಾಂಕಿತವನ್ನು ಬಳಸುತ್ತಿದ್ದರು. ಹೀಗಾಗಿ ಅವರು ಮೌಲಾನಾ ಆಜಾದ್ ಎಂದೇ ಪ್ರಸಿದ್ದರು. ಸ್ವಾತಂತ್ರ್ಯ ಚಳುವಳಿಯಲ್ಲಿ ಪತ್ರಕರ್ತರಾಗಿ ಬ್ರಿಟಿಷ್ ಆಡಳಿತ ವಿರುದ್ಧ ಬರೆಯುತ್ತಿದ್ದ ಲೇಖನಗಳಿಂದ ಮೌಲಾನಾ ಆಜಾದರು ಪ್ರಸಿದ್ಧಿ ಪಡೆದಿದ್ದರು. ಖಿಲಾಫತ್ ಚಳುವಳಿಯ ನೇತೃತ್ವ ವಹಿಸಿದ್ದ ಆಜಾದರು ಮಹಾತ್ಮ ಗಾಂಧೀಜಿಯವರ ನಿಕಟವರ್ತಿಗಳಾದರು. ಮಹಾತ್ಮರು ಆಯೋಜಿಸಿದ್ದ ಅಸಹಕಾರ ಚಳುವಳಿಯಲ್ಲಿ ಅತ್ಯಂತ ಕ್ರಿಯಾಶೀಲ ಯುವಕ ಎಂದು ಹೆಸರಾದರು. ಗಾಂಧೀಜಿಯವರ 'ಸ್ವದೇಶಿ', 'ಸ್ವರಾಜ್' ಚಿಂತನೆಗಳಿಗೆ ಮಾರು ಹೋಗಿ ಅವರ ಜೊತೆ ನಿರಂತರವಾಗಿದ್ದ ಅಬ್ದುಲ್ ಕಲಾಂ ೧೯೨೩ರ ವರ್ಷದಲ್ಲಿ ತಮ್ಮ ೩೫ನೇ ವಯಸ್ಸಿನಲ್ಲ...