ಮೋದಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ರಾಜ್ಯದ 11 ನಗರಗಳು
ಬೆಂಗಳೂರು, ಡಿ.26- ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಸ್ಮಾರ್ಟ್ ಸಿಟಿ ಯೋಜನೆಗೆ ರಾಜ್ಯದಿಂದ 11 ನಗರಗಳನ್ನು ಸರ್ಕಾರ ಆಯ್ಕೆ ಮಾಡಿದೆ. ಈಗಾಗಲೇ ಸ್ಮಾರ್ಟ್ ಸಿಟಿ ಯೋಜನೆಗೆ 11 ನಗರಗಳನ್ನು ಆಯ್ಕೆ ಮಾಡಿ ಕೇಂದ್ರ ಸರ್ಕಾರದ ಅನುಮೋದನೆಗೆ ಕಳುಹಿಸಿಕೊಡಲಾಗಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ. ರಾಮನಗರ, ತುಮಕೂರು, ದೇವನಹಳ್ಳಿ, ಮೈಸೂರು, ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ, ಧಾರವಾಡ, ಮಂಗಲೂರು, ಉಡುಪಿ, ಹೊಸಪೇಟೆ ಮತ್ತು ವಿಜಯಪುರಗಳನ್ನು ಆಯ್ಕೆ ಮಾಡಿ ಅನುಮೋದನೆಗಾಗಿ ಕಳುಹಿಸಿಕೊಡಲಾಗಿದೆ ಎಂದು ತಿಳಿದುಬಂದಿದೆ. ಕೇಂದ್ರ ಸರ್ಕಾರ ರೂಪಿಸಿರುವ ಮಾರ್ಗಸೂಚಿ ಪ್ರಕಾರ, ಸ್ಮಾರ್ಟ್ ಸಿಟಿಗೆ ಯಾವುದೇ ನಗರಗಳನ್ನು
ಆಯ್ಕೆ ಮಾಡಬೇಕಾದರೆ ಒಂದರಿಂದ ನಾಲ್ಕು ಮಿಲಿಯನ್ ಜನಸಂಖ್ಯೆಯನ್ನು ಹೊಂದಿರಲೇಬೇಕು ಎಂಬ ನಿಯಮವಿದೆ
Comments
Post a Comment