912 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೆಪಿಟಿಸಿಎಲ್
Posted by: Gururaj Updated: Tuesday, April 28, 2015, 14:53 [IST]
ಬೆಂಗಳೂರು, ಏ. 28 : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಸಹಾಯಕ ಇಂಜಿನಿಯರ್, ಸಹಾಯಕ ಲೆಕ್ಕಾಧಿಕಾರಿ, ಜೂನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 15, 2015. ಒಟ್ಟು 912 ಹುದ್ದೆಗಳಿವೆ. ಸಹಾಯಕ ಇಂಜಿನಿಯರ್ (ಎಲೆಕ್ಟ್ರಿಕಲ್) 345, ಸಹಾಯಕ ಇಂಜಿನಿಯರ್ (ಸಿವಿಲ್) 4, ಸಹಾಯಕ ಲೆಕ್ಕಾಧಿಕಾರಿ 13, ಜೂನಿಯರ್ ಇಂಜಿನಿಯರ್ 446 ಹುದ್ದೆಗಳಿವೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. [ನೇಮಕಾತಿ ಆದೇಶ ಇಲ್ಲಿದೆ] ವಯೋಮಿತಿ : ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ 18 ವರ್ಷ ತುಂಬಿರಬೇಕು. ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ 35 ವರ್ಷ, 2ಎ/2ಬಿ/3ಎ/3ಬಿ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ, ಎಸ್‌ಸಿ/ಎಸ್‌ಟಿ/ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷಗಳು.
ಅರ್ಜಿ ಶುಲ್ಕದ ವಿವರ : ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಮತ್ತು ಪ್ರವರ್ಗ 1/2ಎ/2ಬಿ/3ಬಿ ಅಭ್ಯರ್ಥಿಗಳಿಗೆ 500 ರೂ., ಎಸ್‌ಸಿ/ಎಸ್‌ಟಿ ವರ್ಗದ ಅಭ್ಯರ್ಥಿಗಳಿಗೆ 300 ರೂ. ಅರ್ಜಿ ಶುಲ್ಕ ನಿಗದಿಗೊಳಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 15ರ ಸಂಜೆ 5 ಗಂಟೆ. ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.
Comments
Post a Comment