KEA's CET 2015 POSTPHONED to MAY 12 & 13
ಸಿಇಟಿ ಮುಂದೂಡಿಕೆ: ಮೇ 12, 13ಕ್ಕೆ ಪರೀಕ್ಷೆ
ಗುರುವಾರ - ಏಪ್ರಿಲ್ -23-2015
ಬೆಂಗಳೂರು, ಎ.22: ವಿವಿಧ ಕಾರ್ಮಿಕ ಸಂಘಟನೆಗಳು ದಿನಾಂಕ 30.04.2015ರಂದು ಒಂದು ದಿನದ ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ-2015 ಪ್ರವೇಶ ಪರೀಕ್ಷೆಯನ್ನು ಮುಂದೂಡಿದೆ.
ಆದ್ದರಿಂದ, ಎಪ್ರಿಲ್ 29, 30 ಹಾಗೂ ಮೇ 1ರಂದು ನಡೆಯಬೇಕಾಗಿದ್ದ ಸಿಇಟಿ ಪರೀಕ್ಷೆಗಳನ್ನು ಮೇ 12 ಮತ್ತು 13ಕ್ಕೆ ಮುಂದೂಡಲಾಗಿದೆ.
ಪರೀಕ್ಷಾ ವೇಳಾಪಟ್ಟಿಯ ವಿವರಗಳನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು. ಹೆಚ್ಚಿನ ವಿವರಗಳಿಗೆ ಪ್ರಾಧಿಕಾರದ ವೆಬ್‌ಸೈಟ್: ಠಿಠಿ://ಛಿ.ಚ್ಟ.್ಞಜ್ಚಿ.ಜ್ಞಿಗೆ ಭೇಟಿ ನೀಡಿ. ಟ್ರೇಡ್ ಯೂನಿಯನ್ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿನ ಕಾರ್ಮಿಕ ಸಂಘಗಳ ಒಕ್ಕೂಟ ಮತ್ತು ಸೆಂಟ್ರಲ್ ಟ್ರೇಡ್ ಯೂನಿಯನ್ನುಗಳು ಎ.30ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅಡಚಣೆಯಾಗುವ ಸಂಭವವಿರುವ ಕಾರಣ ಸರಕಾರವು ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟು ಆದೇಶ ನೀಡಿದ ಹಿನ್ನೆಲೆಯಲ್ಲಿ ಸಿಇಟಿ-2015 ಪ್ರವೇಶ ಪರೀಕ್ಷೆಯನ್ನು ಮುಂದೂಡಿದೆ.
Comments
Post a Comment