BBMP ELECTION : TOTAL=198 WARDS: BJP-100 CONG-75 JDS-14 OTHERS-8.
●ಬಿಬಿಎಂಪಿ ಚುನಾವಣಾ ಫಲಿತಾಂಶ: ಬಿಜೆಪಿ ಜಯಭೇರಿ
ಬೆಂಗಳೂರು:ಸಾಕಷ್ಟು ಕುತೂಹಲ ಕೆರಳಿಸಿರುವ ಬಿಬಿಎಂಪಿ ಚುನಾವಣೆಯ ಮತ ಎಣಿಕೆ ಕಾರ್ಯ ಮಂಗಳವಾರ ಬೆಳಗ್ಗೆ 8ಗಂಟೆಗೆ ಆರಂಭವಾಗಿದ್ದು ಮಧ್ಯಾಹ್ನ 1.15ಕ್ಕೆ ಮುಕ್ತಾಯಗೊಂಡಿದೆ. ಬಿಬಿಎಂಪಿ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಮೂಲಕ ಬಿಬಿಎಂಪಿ ಬಿಜೆಪಿ ವಶವಾಗಿದೆ. ಫಲಿತಾಂಶದಲ್ಲಿ ಬಿಜೆಪಿ 100, ಕಾಂಗ್ರೆಸ್ 75 ಹಾಗೂ ಜೆಡಿಎಸ್ 14 ವಾರ್ಡ್ ಗಳಲ್ಲಿ ಜಯ ಸಾಧಿಸಿದೆ. ಪಕ್ಷೇತರರು 08 ಮಂದಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಕಾಂಗ್ರೆಸ್ ಜೆಡಿಎಸ್ ಇತರೆ
100 75 14 08
ಒಟ್ಟು 198 ವಾರ್ಡ್ ಗಳನ್ನು ಹೊಂದಿರುವ ಬಿಬಿಎಂಪಿಯಲ್ಲಿ ಈಗಾಗಲೇ ಒಂದು ಕ್ಷೇತ್ರದಲ್ಲಿ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಬಿಜೆಪಿ ಖಾತೆ ತೆರೆದಿತ್ತು. ಇಂದು ನಡೆದ 197 ವಾರ್ಡ್ ಗಳ ಮತ ಎಣಿಕೆಯಲ್ಲಿ 100 ಸ್ಥಾನಗಳನ್ನು ಬಿಜೆಪಿ ತನ್ನ ಬಗಲಿಗೆ ಹಾಕಿಕೊಂಡಿದೆ.
ಉಳಿದ 197 ವಾರ್ಡ್ ಗಳಿಗೆ ಶನಿವಾರ ಮತದಾನ ನಡೆದಿದ್ದು, ಮತಯಂತ್ರದಲ್ಲಿರುವ ಅಭ್ಯರ್ಥಿಗಳ ಭವಿಷ್ಯ ಸಂಪೂರ್ಣವಾಗಿ ಹೊರಬಿದ್ದಿದೆ. ಎಲ್ಲೆಡೆ ವಿಜಯಿ ಅಭ್ಯರ್ಥಿಗಳು, ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾರೆ.
Comments
Post a Comment