ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಯಡವಟ್ಟು.
ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಯಡವಟ್ಟು.
(PSGadyal Teacher Vijayapur ).
ಯಾದಗಿರಿ(ಸೆ.27): ಕೆಎಎಸ್ ಮುಖ್ಯ ಪರೀಕ್ಷೆಯಲ್ಲಿ ಪ್ರಶ್ನೇ ಪತ್ರಿಕೆಗಳ ವ್ಯತ್ಯಯ ಆಗಿದ್ದ ಸುದ್ದಿ ಮರೆಯಾಗುವ ಮುನ್ನವೇ ಯಾದಗಿರಿ ಜವಾಹರ್ ಕಾಲೇಜಿನ ಪರೀಕ್ಷೆ ಕೇಂದ್ರದಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಅದಲು ಬದಲುಗೊಂಡಿರುವ ಘಟನೆ ನಡೆದಿದೆ.
ಯಾದಗಿರಿ ಜವಾಹರ್ ಕಾಲೇಜಿನ ಪರೀಕ್ಷೆ ಕೇಂದ್ರದಲ್ಲಿ ನಡೆಯುತ್ತಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಸಮಾಜ, ಕಲಾವಿಭಾಗ, ಗಣಿತದ ಬದಲು ವಿಜ್ಞಾನ ಪ್ರಶ್ನೆ ಪತ್ರಿಕೆ ನೀಡಲಾಗಿದ್ದು, ಇಲಾಖೆ ಅಧಿಕಾರಿಗಳ ಜೊತೆ ಅಭ್ಯರ್ಥಿಗಳ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ.
ಇದರಿಂದ ರೊಚ್ಚಿಗೆದ್ದ 250 ಅಭ್ಯರ್ಥಿಗಳು ಪರೀಕ್ಷೆ ಕೇಂದ್ರದ ಎದುರು ಪ್ರತಿಭಟನೆ ನಡೆಸಿದ್ದು, ರಾಜ್ಯಾದ್ಯಂತ ಮರುಪರೀಕ್ಷೆ ನಡೆಸುವಂತೆ ಅಭ್ಯರ್ಥಿಗಳ ಒತ್ತಾಯಿಸಿದ್ದಾರೆ, ಜವಾಹರ್ ಕಾಲೇಜಿಗೆ ಡಿಡಿಪಿಐ ಕೆಂಚೇಗೌಡ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಪ್ರತಿಕ್ರಿಯೇ ನೀಡಿದರುವ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಕೆ.ಎಸ್.ಸತ್ಯಮೂರ್ತಿ, ಯಾದಗಿರಿಯಲ್ಲಿ 300 ಅಭ್ಯರ್ಥಿಗಳಿಗೆ ತೊಂದರೆ ಆಗಿದೆ. ಯಾದಗಿರಿಯಲ್ಲಿ 300 ಅಭ್ಯರ್ಥಿಗಳಿಗೆ ಮಾತ್ರ ಮರುಪರೀಕ್ಷೆ ನಡೆಸಲಾಗುತ್ತಿದೆ. ವರದಿ ಪಡೆದು ಪರೀಕ್ಷಾ ದಿನಾಂಕ ನಿಗದಿ ಮಾಡುತ್ತೇವೆ ಎಂದಿದ್ದಾರೆ.
Comments
Post a Comment