"ರಾಷ್ಟ್ರೀಯ ಅರ್ಹತಾ ಪರೀಕ್ಷೆಗೆ (NET) ಏಪ್ರಿಲ್ 12 ರಿಂದ ಅರ್ಜಿ ಆಹ್ವಾನ"::-
ಪ್ರತಿ ವರ್ಷ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಅಖಿಲ ಭಾರತ ಮಟ್ಟದ ಉಪನ್ಯಾಸಕರ ಅರ್ಹತಾ ಪರೀಕ್ಷೆಯನ್ನು (ನೆಟ್) ವರ್ಷಕ್ಕೆ ಎರಡು ಬಾರಿ ನಡೆಸಿಕೊಂಡು ಬರುತ್ತಿದೆ. ದೇಶದ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಹಾಗೂ ಜೂನಿಯರ್ ರಿಸರ್ಚ್ ಫೆಲೋಶಿಪ್ ನೇಮಕಾತಿಗಾಗಿ ಕನ್ನಡ ಸೇರಿದಂತೆ ವಿವಿಧ ಭಾಷೆಗಳಲ್ಲಿ ಈ ಅರ್ಹತಾ ಪರೀಕ್ಷೆಯನ್ನು ನಡೆಸಲಾಗುತ್ತದೆ. ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಮಾದರಿಯಲ್ಲಿಯೇ ಈ ಪರೀಕ್ಷೆ ನಡೆಯಲಿದ್ದು, ಯುಜಿಸಿ ಪರವಾಗಿ ಸಿಬಿಎಸ್‌ಇ ಈ ಪರೀಕ್ಷೆಯನ್ನು ನಡೆಸಲಿದೆ. 2016ರ ಜುಲೈ 10ರಂದು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.
* ಹುದ್ದೆಗಳ ವಿವರ:
ಆಸಕ್ತ ಅಭ್ಯರ್ಥಿಗಳು ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಜೂನಿಯರ್ ರಿಸರ್ಚ್ ಫೆಲೋಶಿಪ್‌ಗಾಗಿ ಅರ್ಜಿ ಸಲ್ಲಿಸಬಹುದು. ಫೆಲೋಶಿಪ್‌ಗೆ ಆಯ್ಕೆಯಾದವರು ಉನ್ನತ ವ್ಯಾಸಂಗವನ್ನು ಆಯ್ಕೆ ಮಾಡಿಕೊಳ್ಳಬಹುದು ಅಥವಾ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಯನ್ನೂ ಆಯ್ಕೆ ಮಾಡಿಕೊಳ್ಳಬಹುದು. ಐಐಟಿಗಳು ಮತ್ತು ಇತರೆ ರಾಷ್ಟ್ರೀಯ ಸಂಸ್ಥೆಗಳು ಫೆಲೋಶಿಪ್ ನೀಡಲಿದ್ದು, ಇದನ್ನು ಪಡೆಯಲು ಎರಡು ವರ್ಷಗಳ ಕಾಲಾವಕಾಶವಿರುತ್ತದೆ. ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಾಗಿ ಮಾತ್ರ ನೆಟ್ ಪರೀಕ್ಷೆ ಬರೆದವರಿಗೆ ಫೆಲೋಶಿಪ್ ನೀಡಲಾಗುವುದಿಲ್ಲ. ಅರ್ಜಿ ಸಲ್ಲಿಸುವಾಗಲೇ ಅಭ್ಯರ್ಥಿಗಳು ಯಾವುದಕ್ಕೆ ಅರ್ಜಿ ಸಲ್ಲಿಸುತ್ತಿದ್ದೇವೆ ಎಂಬುದನ್ನು ಸ್ಪಷ್ಟವಾಗಿ ನಮೂದಿಸಬೇಕಾಗುತ್ತದೆ.
* ಅರ್ಹತೆಯೇನು?
ಸ್ನಾತಕೋತ್ತರ ಪದವಿಯಲ್ಲಿ ಶೇಕಡಾ 55 ಅಂಕ (ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಶೇಕಡಾ 50) ಗಳಿಸಿರುವ ಅಭ್ಯರ್ಥಿಗಳು ಈ ಅರ್ಹತಾ ಪರೀಕ್ಷೆ ತೆಗೆದುಕೊಳ್ಳಬಹುದು. ಅಂತಿಮ ವರ್ಷದ ಸ್ನಾತಕೋತ್ತರ ಪರೀಕ್ಷೆ ಎದುರಿಸುತ್ತಿರುವ ಅಭ್ಯರ್ಥಿಗಳು ಕೂಡ ಪರೀಕ್ಷೆಯನ್ನು ತೆಗೆದುಕೊಳ್ಳಲು ಅರ್ಹರಾಗಿರುತ್ತಾರೆ. ಆದರೆ, ಅಂಥ ಅಭ್ಯರ್ಥಿಗಳು ಸ್ನಾತಕೋತ್ತರ ಪರೀಕ್ಷೆಯಲ್ಲಿ ನಿಗದಿಪಡಿಸಿದ ಶೇಕಡಾ 55 ಅಂಕ ಪಡೆದರೆ ಮಾತ್ರ ನೆಟ್ ಫಲಿತಾಂಶವನ್ನು ಪ್ರಕಟಿಸುವ ಸಂದರ್ಭದಲ್ಲಿ ಅವರನ್ನು ಪರಿಗಣಿಸಲಾಗುತ್ತದೆ.
* ವಯಸ್ಸು ಎಷ್ಟಿರಬೇಕು?:
ಅಸಿಸ್ಟೆಂಟ್ ಪ್ರೊಫೆಸರ್ ಆಗಲು ಅರ್ಹತೆ ಪಡೆಯುವ ಉದ್ದೇಶದಿಂದ ಪರೀಕ್ಷೆ ಬರೆಯುವವರಿಗೆ ಗರಿಷ್ಠ ವಯೋಮಿತಿಯಲ್ಲಿ ನಿರ್ಬಂಧಗಳೇನೂ ಇಲ್ಲ. ಆದರೆ, ಜೂನಿಯರ್ ಫೆಲೋಶಿಪ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 28 ವರ್ಷ.
* ಶುಲ್ಕ ಎಷ್ಟು?:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600 ರೂ. ಒಬಿಸಿ ಅಭ್ಯರ್ಥಿಗಳಿಗೆ 300 ರೂ. ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 150 ರೂ. ಶುಲ್ಕ ನಿಗದಿಪಡಿಸಲಾಗಿದೆ.
#ವಿವರಗಳು:-
* ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭ:
2016ರ ಏಪ್ರಿಲ್ 12
* ಅರ್ಜಿ ಸಲ್ಲಿಸಲು ಕೊನೆಯ ದಿನ:
2016ರ ಮೇ 12
* ಶುಲ್ಕ ಪಾವತಿಸಲು ಕೊನೆಯ ದಿನ:
2016ರ ಮೇ 13
* ಪರೀಕ್ಷೆ ನಡೆಯುವ ದಿನ:
2016ರ ಜುಲೈ 10
* ಸಹಾಯವಾಣಿ:
7042399520/ 7042399521/ 7042399524,/7042399525,
* ವಿವರಗಳನ್ನು ಪಡೆಯಲು ವೆಬ್ ವಿಳಾಸ:
cbsenet.nic.in
Comments
Post a Comment