5,311 ಪೊಲೀಸ್ ಕಾನ್ಸ್‌ಟೇಬಲ್ ನೇಮಕ
Sep 21, 2016, 04.00 AM IST
ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ / ಈ ಬಾರಿ ಲಿಖಿತ ಪರೀಕ್ಷೆ ಮೊದಲು * ನಾಗರಿಕ ಪೊಲೀಸ್ ಕನ್ಸ್‌ಟೇಬಲ್ -3477 * ಸಶಸ್ತ್ರ ಪೊಲೀಸ್ ಕನ್ಸ್‌ಟೇಬಲ್- 1834 ರಾಜ್ಯ ಪೊಲೀಸ್ ಇಲಾಖೆಯಲ್ಲೀಗ ಉದ್ಯೋಗ ಸುಗ್ಗಿ. ಎರಡು ದಿನಗಳ ಹಿಂದೆ 544 ಸಬ್‌ಇನ್ಸ್ ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದ ಇಲಾಖೆಯು ಇದೀಗ ಬರೋಬ್ಬರಿ 5,311 ಪೊಲೀಸ್ ಕಾನ್ಸ್‌ಟೇಬಲ್‌ಗಳ ನೇಮಕಕ್ಕೆ ಪ್ರಕಟಣೆ ಹೊರಡಿಸಿದೆ. ಸೆಪ್ಟೆಂಬರ್ 21ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಅಕ್ಟೋಬರ್ 17 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅರ್ಹತೆಗಳೇನು? ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಶಿಕ್ಷಣ ಹೊಂದಿರುವ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 19ರಿಂದ 27 ವರ್ಷ. ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಪುರುಷರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ರಿಂದ 27 ವರ್ಷ. ಎಸ್‌ಎ/ಎಸ್‌ಟಿ ಮತ್ತು ಒಬಿಸಿ ಅಭ್ಯರ್ಥಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 2 ವರ್ಷ ಹಾಗೂ ಬುಡಕಟ್ಟು ಜನಾಂಗದ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ಇರುತ್ತದೆ. ದೈಹಿಕ ಅರ್ಹತೆ: ನಾಗರಿಕ ಮತ್ತು ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ಎತ್ತರ 168 ಸೆಂ.ಮೀ. ಮತ್ತು ಎದೆ ಸುತ್ತಳತೆ 86 ಸೆಂ.ಮೀ. ಮಹಿಳಾ ಅಭ್ಯರ್ಥಿಗಳಾಗಿದ್ದಲ್ಲಿ ಕನಿಷ್ಠ ಎತ್ತರ 157 ಸೆಂ.ಮೀ. ಮತ್ತು ತೂಕ 45 ಕೆ.ಜಿ. ಹೊಂದಿರಬೇಕು. ಅರ್ಜಿ ಶುಲ್ಕ: ಸಾಮಾನ್ಯ ವರ್ಗ, ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿಗೆ ಸೇರಿದ ಅಭ್ಯರ್ಥಿಗಳಿಗೆ 250 ರೂಪಾಯಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 100 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ. ಶುಲ್ಕವನ್ನು ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಅಥವಾ ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್‌ನಲ್ಲಿ ಪಾವತಿಸಬಹುದು. ನೇಮಕ ಹೇಗೆ? ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪೂರ್ಣಗೊಂಡ ನಂತರ ನಂತರ ಈ ಬಾರಿ ಎಲ್ಲರಿಗೂ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಇದರ ನಿಯಮದನುಸಾರ ಅರ್ಹತೆ ಪಡೆದವರಿಗೆ ಮಾತ್ರ ದೇಹದಾಢ್ರ್ಯತೆ ಮತ್ತು ಸಹಿಷ್ಠುತೆ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಪರೀಕ್ಷೆಯನ್ನು ಸಂಬಂಧಪಟ್ಟ ಪೊಲೀಸ್ ಅಧೀಕ್ಷಕರ ಕಚೇರಿಯು ನಿಗದಿಪಡಿಸಿದ ಸ್ಥಳದಲ್ಲಿ ನಡೆಸುತ್ತದೆ. ಲಿಖಿತ ಪರೀಕ್ಷೆಯು ಹಿಂದಿನಂತೆಯೇ ವಸ್ತುನಿಷ್ಠ ಮಾದರಿಯಲ್ಲಿ ನಡೆಯಲಿದ್ದು, ಇದರಲ್ಲಿ ಮತ್ತು ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಆಧರಿಸಿ ತಾತ್ಕಾಲಿಕ ಅರ್ಹತಾ ಪಟ್ಟಿ ಪ್ರಕಟಿಸಲಾಗುತ್ತದೆ. ನಂತರ ವೈದ್ಯಕೀಯ ಪರೀಕ್ಷೆಗೊಳಪಡಿಸಿ, ದಾಖಲೆಗಳ ಪರಿಶೀಲನೆ ನಡೆಸಿದ ಬಳಿಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಇತ್ತ ಗಮನಿಸಿ -ನೇಮಕಾತಿಗೆ ಸಂಬಂಧಿಸಿದ ಎಲ್ಲಾ ವಿವರಗಳು ವೆಬ್‌ಸೈಟ್‌ನಲ್ಲಿ ಲಭ್ಯ. ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ. -ಅರ್ಜಿ ಸಲ್ಲಿಸುವಾಗ ಸಮಸ್ಯೆಗಳು ಕಂಡುಬಂದಲ್ಲಿ ಸಹಾಯವಾಣಿಗೆ ಕರೆ ಮಾಡಿ ತಿಳಿದುಕೊಳ್ಳಿ. -ಹುದ್ದೆ, ನೇಮಕಾತಿಗೆ ಸಂಬಂಧಿಸಿದ ಎಲ್ಲಾ ವಿವರಗಳು ವೆಬ್‌ಸೈಟ್‌ನಲ್ಲೇ ಸಿಗುತ್ತವೆ. ಅಂಚೆ ಮೂಲಕ ಅಭ್ಯರ್ಥಿಗಳಿಗೆ ಮಾಹಿತಿ ನೀಡಲಾಗುವುದಿಲ್ಲ. -ಒಬ್ಬರು ಒಂದು ಅರ್ಜಿ ಸಲ್ಲಿಸಲು ಮಾತ್ರ ಅವಕಾಶ. ಒಂದಕ್ಕಿಂತ ಹೆಚ್ಚು ಅರ್ಜಿ ಸಲ್ಲಿಸಿದ್ದಲ್ಲಿ ಒಂದು ಅರ್ಜಿಯನ್ನು ಮಾತ್ರ ಪರಿಗಣಿಸಲಾಗುತ್ತದೆ. ಕ್ವಿಕ್ ಲುಕ್ -ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 17, 2016 -ಸಹಾಯವಾಣಿ: 080-22943346 -ಹೆಚ್ಚಿನ ಮಾಹಿತಿಗೆ ವೆಬ್: www.ksp.gov.in
Comments
Post a Comment