2017ರ ಸಿಇಟಿ ಪರೀಕ್ಷಾ ವೇಳಾಪಟ್ಟಿ ಪ್ರಕಟ
ಬೆಂಗಳೂರು ಡಿ.12 : 2017ರ ಮೇ ತಿಂಗಳಿನಲ್ಲಿ ನಡೆಯುವ ಸಿಇಟಿ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟ ಮಾಡಿದೆ. ಮುಂದಿನ ವರ್ಷದಿಂದ ವೈದ್ಯಕೀಯ ಸೀಟುಗಳಿಗೆ ನೀಟ್ ಕಡ್ಡಾಯವಾಗಿರುವ ಕಾರಣ ವೈದ್ಯಕೀಯ ಸೀಟು ಹೊರತುಪಡಿಸಿ ಎಂಜಿನಿಯರಿಂಗ್, ಆಯುಷ್ ಹಾಗೂ ಕೃಷಿ ಎಂಜಿನಿಯರಿಂಗ್ ಸೀಟುಗಳಿಗೆ ಮಾತ್ರ ಪರೀಕ್ಷೆ ನಡೆಯಲಿದೆ.
ಮೇ 2ರಂದು ಬೆಳಗ್ಗೆ ಜೀವಶಾಸ್ತ್ರ ನಡೆದರೆ ಮಧ್ಯಾಹ್ನದ ಬಳಿಕ ಗಣಿತ ಪರೀಕ್ಷೆ ನಡೆಯಲಿದೆ. ಮೇ 3ರಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿದೆ. ಈ ನಾಲ್ಕು ವಿಷಯಗಳಿಗೆ 60 ಅಂಕಗಳನ್ನು ನಿಗದಿಪಡಿಸಲಾಗಿದೆ. ಬೆಳಗ್ಗೆ ನಡೆಯುವ ಪರೀಕ್ಷೆಗಳು ಬೆಳಗ್ಗೆ 10.30ರಿಂದ 11.50ರವರೆಗೆ ನಡೆದರೆ ಮಧ್ಯಾಹ್ನದ ಪರೀಕ್ಷೆಗಳು 2.30ರಿಂದ 3.50ರವರೆಗೆ ನಡೆಯಲಿದೆ. ಹೊರ ನಾಡು, ಗಡಿನಾಡು ಕನ್ನಡಿಗರಿಗೆ 50 ಅಂಕಗಳಿಗೆ ಮಾತ್ರ ನಡೆಯುವ ಕನ್ನಡ ಭಾಷಾ ಪರೀಕ್ಷೆ ಮೇ 4ರಂದು ಬೆಳಗ್ಗೆ 11.30ರಿಂದ 12.30ರವರೆಗೆ ನಡೆಯಲಿದೆ.
Comments
Post a Comment