ಜನವರಿ 15ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(KARTET)
2016ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET 2016) ಯನ್ನು ದಿನಾಂಕ 15-01-2017 ಭಾನುವಾರದಂದು ಸಮಯ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12.00ರವರೆಗೆ ಹಾಗೂ ಮಧ್ಯಾಹ್ನ 2.00 ರಿಂದ 4.30ರವರೆಗೆ ಕ್ರಮವಾಗಿ ಪತ್ರಿಕೆ -1 ಹಾಗೂ ಪತ್ರಿಕೆ-2ರ ಪರೀಕ್ಷೆಗಳು ರಾಜ್ಯಾದ್ಯಂತ ಜಿಲ್ಲಾ ಕೇಂದ್ರದ ಒಟ್ಟು 871 ಪರೀಕ್ಷಾ ಕೇಂದ್ರಗಳಲ್ಲಿ ಹಮ್ಮಿಕೊಳ್ಳಲಾಗಿದೆ.
ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ಅವಶ್ಯವಿರುವ ಪ್ರವೇಶ ಪತ್ರವನ್ನು (ಇಲಾಖಾ ವೆಬ್‍ಸೈಟ್ www.schooleducation.kar.nic.in)) ಇಲಾಖಾ ಅಂತರ್ಜಾಲದ ಮೂಲಕ ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ.
ಅಭ್ಯರ್ಥಿಗಳು ಪಡೆದುಕೊಂಡಿರುವ ಪ್ರವೇಶ ಪತ್ರಗಳಲ್ಲಿ ಮುದ್ರಿತಗೊಂಡಿರುವ ಹೆಸರು, ನೋಂದಣಿ ಸಂಖ್ಯೆ ಹಾಗೂ ಪರೀಕ್ಷಾ ಕೇಂದ್ರದ ಸಂಖ್ಯೆ, ಹೆಸರು/ವಿಳಾಸ ಇತ್ಯಾದಿಗಳನ್ನು ಖಾತ್ರಿಪಡಿಸಿಕೊಳ್ಳುವುದು. ಒಂದು ವೇಳೆ ಮಾಹಿತಿಗಳು ತಪ್ಪಾಗಿದ್ದಲ್ಲಿ ದೂರವಾಣಿ ಮೂಲಕ ಕೇಂದ್ರೀಕೃತ ದಾಖಲಾತಿ ಘಟಕ ಕಚೇರಿಯನ್ನು ಸಂಪರ್ಕಿಸಿ ಅಥವಾ cackarnataka@gmail.com ಗೆ ನೋಂದಣಿ ಸಂಖ್ಯೆ ಹಾಗೂ ಸಮಸ್ಯೆಯನ್ನು ಇ-ಮೇಲ್ ಮೂಲಕ ಕಳುಹಿಸಿ ಸರಿಪಡಿಸಿಕೊಳ್ಳುವುದು ಎಂದು ಪ್ರಕಟಣೆ ತಿಳಿಸಿದೆ.
Comments
Post a Comment