ಲೋಕಸಭೆಯಲ್ಲಿ ಜಿಎಸ್'ಟಿಗೆ ಅಂಗೀಕಾರ
By Suvarna Web Desk | 10:17 AM ಸಂಪುಟದಲ್ಲಿ ಅನುಮೋದನೆ ದೊರೆತ ಬಳಿಕ ಕೇಂದ್ರ ಸರಕು ಮತ್ತು ಸೇವಾ ತೆರಿಗೆ ಮಸೂದೆ 2017, ಏಕೀಕೃತ ಸರಕು ಮತ್ತು ಸೇವಾ ತೆರಿಗೆ ಮಸೂದೆ-2017, ಕೇಂದ್ರಾಡಳಿತ ಪ್ರದೇಶ ಸರಕು ಮತ್ತು ಸೇವಾ ತೆರಿಗೆ ಮಸೂದೆ-2017, ಜಿಎಸ್ ಟಿ ಮಸೂದೆ 2017ಗಳನ್ನು ಲೋಕಸಭೆಯಲ್ಲಿ ಮಂಡಿಸಲಾಗಿದ್ದು, ಜಿಎಸ್ ಟಿ ಜಾರಿಯ (ಜುಲೈ 1 ರಿಂದ) ಒಳಗಾಗಿ ಈ ಮಸೂದೆಗಳನ್ನು ರಾಜ್ಯದ ವಿಧಾನಸಭೆಗಳಲ್ಲೂ ಮಂಡಿಸಿ ಅಂಗೀಕಾರ ಪಡೆದುಕೊಳ್ಳಲಾಗುತ್ತದೆ. ನವದೆಹಲಿ (ಮಾ.29): ಕೊನೆಗೂ ಮಹತ್ವಕಾಂಕ್ಷೆಯ ಜಿಎಸ್'ಟಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗಿದೆ. 'ಒಂದು ದೇಶ, ಒಂದು ತೆರಿಗೆ' ಸಂಬಂಧ ಮಹತ್ವ ಹೆಜ್ಜೆ ಇಟ್ಟಿದ್ದು, ಏಕಕಾಲದಲ್ಲಿ 4 ಮಸೂದೆಗಳು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಮತದಾನದ ಮೂಲಕ ಜಿಎಸ್ಟಿ ಮಸೂದೆ ಅಂಗೀಕಾರವಾಗಿದ್ದು ಜುಲೈ 1ರಿಂದಲೇ ದೇಶಾದ್ಯಂತ ಏಕರೂಪ ತೆರಿಗೆ ಜಾರಿಯಾಗುವ ಸಾಧ್ಯತೆಯಿದೆ. ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಇಂದು ಲೋಕಸಭೆಯಲ್ಲಿ ಜಿಎಸ್'ಟಿ ಕುರಿತ 4 ತಿದ್ದುಪಡಿ ಮಸೂದೆಗಳನ್ನು ಮಂಡಿಸಿದರು. ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತ ಬಳಿಕ ಕೇಂದ್ರ ಸರಕು ಮತ್ತು ಸೇವಾ ತೆರಿಗೆ ಮಸೂದೆ 2017, ಏಕೀಕೃತ ಸರಕು ಮತ್ತು ಸೇವಾ ತೆರಿಗೆ ಮಸೂದೆ-2017, ಕೇಂದ್ರಾಡಳಿತ ಪ್ರದೇಶ ಸರಕು ಮತ್ತು ಸೇವಾ ತೆರಿಗೆ ಮಸೂದೆ-2017, ಜಿಎಸ್ ಟಿ ಮಸೂದೆ 2017ಗಳನ್ನು ಲೋಕಸಭೆಯಲ್ಲಿ ಮಂಡ...