ಡಾ..ಶ್ರೀ ಶಿವಕುಮಾರಸ್ವಾಮೀಜಿ 110 ನೇ ಜನ್ಮದಿನೋತ್ಸವ
ಬೆಂಗಳೂರು: ರಾಜ್ಯವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆಯು ತುಮಕೂರು ಸಿದ್ಧಗಂಗಾ ಮಠದ ಶತಾಯುಷಿ ಡಾ. ಶಿವಕುಮಾರ ಸ್ವಾಮೀಜಿ ಅವರ 110ನೇ ಜನ್ಮದಿನೋತ್ಸವದ ಅಂಗವಾಗಿ ಬೃಹತ್ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಸಂಸ್ಥೆ ಅಧ್ಯಕ್ಷ ಬಿ.ಎಸ್. ಪರಮಶಿವಯ್ಯ ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,'' ಏ.1 ರಂದು ತುಮಕೂರಿನ ಸರಕಾರಿ ಜೂನಿಯರ್ ಕಾಲೇಜು ಮೈದಾನ ಹಾಗೂ ಮಾ.19ರ ಸಂಜೆ ಬೆಂಗಳೂರು ವಿಜಯನಗರದ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ಗುರುವಂದನೆಯನ್ನು ಹಮ್ಮಿಕೊಳ್ಳಲಾಗಿದೆ. ನಾನಾ ಮಠಾಧೀಶರ ಸಮ್ಮುಖದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಜತೆಗೆ ದಾಸೋಹ ವ್ಯವಸ್ಥೆ ಮಾಡಲಾಗಿದೆ,'' ಎಂದರು.
''ಜನ್ಮ ದಿನದ ಅಂಗವಾಗಿ ಶ್ರೀಗಳ ಭಾವಚಿತ್ರ ಒಳಗೊಂಡ ಸಿಂಗರಿಸಿದ ವಾಹನದ ಮೆರವಣಿಗೆ ಹಮ್ಮಿಕೊಂಡಿದ್ದು, ಯಾತ್ರೆ ಈಗಾಗಲೇ ಆರಂಭವಾಗಿದೆ. ಕೊಡಗು, ಚಾಮರಾಜನಗರ, ತುಮಕೂರು, ಹಾಸನ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ರಾಮನಗರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ವಾಹನ ಸಂಚರಿಸಲಿದೆ. ಮಾ.18 ರಂದು ಬೆಂಗಳೂರಿಗೆ ಆಗಮಿಸಲಿದೆ,'' ಎಂದು ಹೇಳಿದರು.
''ಮಾ. 19 ಮತ್ತು 20 ರಂದು ವಿಜಯನಗರದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಯಲಿದೆ. ಅದಕ್ಕೂ ಮುನ್ನ ಯಾತ್ರೆಯು ಚಂದ್ರಾಲೇಔಟ್, ಬಸವೇಶ್ವರನಗರ, ರಾಜಾಜಿನಗರ, ಜಯನಗರ, ಚಾಮರಾಜಪೇಟೆ, ಅಕ್ಕಿಪೇಟೆ, ನಾಗರಬಾವಿ ಸೇರಿದಂತೆ ನಗರದ ವಿವಿಧ ಬಡಾವಣೆಗಳ ಮೂಲಕ ಸಂಚರಿಸಲಿದೆ,'' ಎಂದರು.
Comments
Post a Comment