*ಕೆಪಿಎಸ್ಸಿ: ಗ್ರೂಪ್ 'ಸಿ' 1604 ಹುದ್ದೆಗಳ ನೇಮಕಾತಿ ಕೆಪಿಎಸ್ಸಿ: ಗ್ರೂಪ್ 'ಸಿ' 1604 ಹುದ್ದೆಗಳ ನೇಮಕಾತಿ*✍



*ಕೆಪಿಎಸ್ಸಿ ಗ್ರೂಪ್ ಸಿ ವೃಂದದ ತಾಂತ್ರಿಕ/ ತಾಂತ್ರಿಕೇತರ ಹುದ್ದೆಗಳ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. 61 ತಾಂತ್ರಿಕ ಹುದ್ದೆಗಳು ಮತ್ತು 1543 ತಾಂತ್ರಿಕೇತರ ಹುದ್ದೆಗಳು ಸೇರಿ ಒಟ್ಟು 1604 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕೆಪಿಎಸ್ಸಿ      ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 27.11.2017 • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28.12.2017 (ರಾತ್ರಿ 11-45 ಘಂಟೆಯೊಳಗೆ) • ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 29.12.2017 (ಅಂಚೆ ಕಛೇರಿಯ ಕಾರ್ಯದ ವೇಳೆಯೊಳಗೆ/ ಶುಲ್ಕ ಪಾವತಿಗೆ ರಾತ್ರಿ 11.45 ಘಂಟೆಯೊಳಗೆ). • ತಾಂತ್ರಿಕ ಮತ್ತು ತಾಂತ್ರಿಕೇತರ ಎರಡೂ ಹುದ್ದೆಗಳಿಗೂ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪ್ರತ್ಯೇಕ ಅರ್ಜಿ ಹಾಗೂ ಶುಲ್ಕವನ್ನು ಪಾವತಿಸಬೇಕು.
ಅರ್ಜಿಗಳನ್ನು ಆನ್-ಲೈನ್ (ಎಲೆಕ್ಟ್ರಾನಿಕ್ ಮಾರ್ಗ) ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ. ಶುಲ್ಕ ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ : ರೂ.600/- ಪ್ರವರ್ಗ 2(ಎ), 2(ಬಿ), 3(ಎ) ಮತ್ತು 3(ಬಿ) ಅಭ್ಯರ್ಥಿಗಳಿಗೆ: ರೂ.300/- ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ.50/- ಆಯ್ಕೆ ವಿಧಾನ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಶೈಕ್ಷಣಿಕ ವಿದ್ಯಾರ್ಹತೆ ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅನುಸೂಚಿಯಲ್ಲಿ ಆಯಾ ಹುದ್ದೆಗಳ ಮುಂದೆ ಸೂಚಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಹೊಂದಿರಲೇಬೇಕು. ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಈ ಕೆಳಕಂಡ ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು: ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷಗಳು ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು

ಕೇಂದ್ರ ಕಛೇರಿಯ ಮಾಹಿತಿ ಕೇಂದ್ರ : 080-30574957/ 080-30574901

ಪ್ರಾಂತೀಯ ಕಛೇರಿ ಮೈಸೂರು : 0821-2545956

ಪ್ರಾಂತೀಯ ಕಛೇರಿ ಬೆಳಗಾವಿ : 0831-2475345

ಪ್ರಾಂತೀಯ ಕಛೇರಿ ಗುಲ್ಬರ್ಗಾ : 08472-227944

ಪ್ರಾಂತೀಯ ಕಛೇರಿ ಶಿವಮೊಗ್ಗ : 08182-228099

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ*
http://kpsc.kar.nic.in/NOTIFICATION%2025.11.2017.pdf

Comments

Popular posts from this blog

ವಯಸ್ಸಿನ ಲೆಕ್ಕಾಚಾರ 2024

KARNATAK STATE SSLC RESULT 2024

ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಪ್ರಯುಕ್ತ ರಸಪ್ರಶ್ನೆಗಳು