*ಬರಹಗಾರ್ತಿ & ಇನ್ಫೋಸಿಸ್ ಅಧ್ಯಕ್ಷೆ ಸುಧಾ ಮೂರ್ತಿಯಿಂದ ಈ ಬಾರಿ ದಸರಾ ಉದ್ಘಾಟನೆ*



Tuesday, 28 Aug,

*ಬೆಂಗಳೂರು[ಆ.28]: ಈ ಬಾರಿಯ ನಾಡ ಹಬ್ಬ ದಸರಾವನ್ನು ಖ್ಯಾತ ಬರಹಗಾರ್ತಿ ಹಾಗೂ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರು ಉದ್ಘಾಟಿಸಲಿದ್ದಾರೆ.*

*ಅಕ್ಟೋಬರ್ 19 ರಿಂದ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ 409ನೇ ನಾಡ ಹಬ್ಬ ನಡೆಯಲಿದ್ದು ಲೇಖಕಿ ಸುಧಾ ಮೂರ್ತಿ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದು ರಾಜ್ಯ ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ.*

*10 ದಿನಗಳ ಕಾಲ ವೈಭವಯುತವಾಗಿ ನಡೆಯುವ ನಾಡ ಹಬ್ಬಕ್ಕೆ ದೇಶ ವಿದೇಶದಿಂದ ಲಕ್ಷಾಂತರ ಮಂದಿ ಪಾಲ್ಗೊಳ್ಳಲಿದ್ದಾರೆ. ಸುಧಾ ಮೂರ್ತಿ ಅವರು ಡಾಲರ್ ಸೊಸೆ, ಮಹಾಶ್ವೇತಾ,ಅತಿರಿಕ್ತೆ ಸೇರಿದಂತೆ ಕನ್ನಡ ಹಾಗೂ ಇಂಗ್ಲಿಷಿನಲ್ಲಿ ಒಟ್ಟು 12 ಕೃತಿಗಳನ್ನು ರಚಿಸಿದ್ದಾರೆ.*
*ಇವರು ಪತಿ ಇನ್ಫೋಸಿಸ್ ಸಂಸ್ಥೆಯ ಸಹ ಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ದೇಶದ ಪ್ರಖ್ಯಾತ ಐಟಿ ಉದ್ಯಮಿ.*

Comments

Popular posts from this blog

ವಯಸ್ಸಿನ ಲೆಕ್ಕಾಚಾರ 2024

KARNATAK STATE SSLC RESULT 2024

ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಪ್ರಯುಕ್ತ ರಸಪ್ರಶ್ನೆಗಳು