ಉದಯವಾಣಿ, May 25, 2016, 10:40 AM IST ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಬುಧವಾರ ಪ್ರಕಟವಾಗಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ, ಉಡುಪಿ ದ್ವಿತೀಯ, ಕೊಡಗು ತೃತೀಯ ಹಾಗೂ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. 91 ಕಾಲೇಜುಗಳು ಶೂನ್ಯ ಫಲಿತಾಂಶ ಬಂದಿದೆ ಎಂದು ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. 11 ಗಂಟೆ ವೇಳೆಗೆ ಸರ್ಕಾರದ ಎರಡು ವೆಬ್ಸೈಟ್ಗಳಲ್ಲಿ ಫಲಿತಾಂಶ ವಿದ್ಯಾರ್ಥಿಗಳಿಗೆ ಲಭ್ಯವಾಗಲಿದೆ. ಗುರುವಾರ ಆಯಾ ಪಿಯು ಕಾಲೇಜುಗಳಲ್ಲಿ ಫಲಿತಾಂಶ ದೊರೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆ ಶೇ.90.48ರಷ್ಟು ವಿದ್ಯಾರ್ಥಿಗಳು ತೇರ್ಗಡೆ, ಉಡುಪಿ ಜಿಲ್ಲೆಯಲ್ಲಿ ಶೇ.90.35ರಷ್ಟು ವಿದ್ಯಾರ್ಥಿಗಳು ಪಾಸ್. ಕೊಡಗು ಜಿಲ್ಲೆಯಲ್ಲಿ ಶೇ.79.35ರಷ್ಟು ವಿದ್ಯಾರ್ಥಿಗಳು ಪಾಸ್. ಯಾದಗಿರಿ ಜಿಲ್ಲೆಯಲ್ಲಿ ಶೇ.44.16ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷ ಶೇ.60.54ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದರು. ಪ್ರಸಕ್ತ ವರ್ಷ 57.28ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಫಲಿತಾಂಶಕ್ಕೆ ಈ ವೆಬ್ ಸೈಟ್ ನೋಡಿ: ಸರ್ಕಾರದ www.karresults.nic.in ಮತ್ತು www.puc.kar.nic.in ವೆಬ್ಸೈಟ್ಗಳಲ್ಲಿ ಫಲಿತಾಂಶ ಬಾಳೆಹಣ್ಣ...