ಶಿಕ್ಷಣ ಕ್ಷೇತ್ರದಲ್ಲಿ ಜನಪ್ರಿಯವಾದ ಮೊಬೈಲ್ APPಗಳು::
ಇದು ಡಿಜಿಟಲ್ ಯುಗ . ನಮ್ಮ ಎಲ್ಲ ಸಂವೇದನಾ ಶಕ್ತಿಯು ಟೆಕ್ನಾಲಜಿಯ ಮೇಲೆ ಅವಲಂಭಿತವಾಗಿದೆ. ಮೆಸೇಜಿಂಗ್, ಚಾಟಿಂಗ್ , ಗೇಮಿಂಗ್ ನಿಂದ ಹಿಡಿದು ದೊಡ್ಡ ದೊಡ್ಡ ಮಟ್ಟದ ತಾಂತ್ರಿಕ ಸಂಶೋಧನೆ , ಕಾರ್ಯಾ ಚಟುವಟಿಕೆಗಳಲ್ಲಿ ಹೆಚ್ಚಿನ ಸಹಭಾಗಿತ್ವ ಟೆಕ್ನಾಲಜಿಯದ್ದಾಗಿದೆ. ಟೆಕ್ನಾಲಜಿ ಯಿಲ್ಲದ ಬದುಕನ್ನು ಇಂದು ಮಾನವ ಕ್ಷಣದ ಮಟ್ಟಿಗೂ ಊಹಿಸಲಾರ. ದಿನ ನಿತ್ಯವೂ ಹೊಸ ಅವಿಷ್ಕಾರದೊಂದಿಗೆ ನೂತನ ತಂತ್ರಾಂಶಗಳನ್ನು ಕಂಡು ಹಿಡಿದು ತನ್ನ ಕಾರ್ಯಕ್ಷಮತೆಯನ್ನು ಅಲ್ಪ ಸಮಯದಲ್ಲಿ ವಿಶಾಲವಾಗಿ ಪ್ರಕಟಿಸುತ್ತ ಅವಿನಾಭಾವ ಸಾಧನೆ ಮಾಡುತ್ತಿರುವ ಮಾನವ ಮಿದುಳಿಗೆ ಎಷ್ಟು ಸಲಾಂ ಹೇಳಿದರೂ ಸಾಲದು. ಇಂದು ಸ್ಮಾರ್ಟ್ ಪೋನ್ ಎಂಬ ಸಣ್ಣ ವಸ್ತುವಿನಲ್ಲಿ ಇಡೀ ಜಗತ್ತಿನ ಎಲ್ಲ ವಿಚಾರಗಳನ್ನು ಬಚ್ಚಿಟ್ಟುಕೊಳ್ಳ ಬಹುದು . ಹೆಬ್ಬೆರಳಿನ ತುತ್ತ ತುದಿಯಿಂದ ಟ್ಯಾಪ್ ಮಾಡುವ ಮೂಲಕ ಊಹೆಗೂ ನಿಲುಕದ ಹೊಸ ವಿಶ್ವವನ್ನೇ ನಾವು ಕಾಣಬಹುದು. ಟೆಕ್ನಿಕಲ್ ಆಗಿ ಹೇಳಿದರೆ "ಇದು ಸ್ಮಾರ್ಟ್ ಜನರ ಸ್ಮಾರ್ಟ್ ಯುಗ" . ವಿದ್ಯಾರ್ಥಿಯಿಂದ ಹಿಡಿದು ಮುಪ್ಪಿನ ದಿನಗಳನ್ನು ಕಳೆಯುವ ವೃದ್ಧರು ಸಹ ತಮ್ಮ ದೈನಂದಿನ ಜೀವನಕ್ಕೆ ಸ್ಮಾರ್ಟ್ ಮೆರಗು ನೀಡಲು ದಿನ ನಿತ್ಯವೂ ಕಸರತ್ತು ಮಾಡುತ್ತಾರೆ . ಸಾಮಾನ್ಯವಾಗಿ ಹಿರಿಯರು "ನಿಮ್ಮ ಮನೆಯಲ್ಲಿ ಫೋನ್ ಇದೆಯಾ ?" ಎಂಬ ಪ್ರಶ್ನೆ ಕೇಳುತಿದ್ದ ಕಾಲ ಒಂದಿತ್ತು . ಆದರೆ ಇಂದು ಕಿರಿಯರು ಒಂದು ಹೆಜ್ಜೆ ಮುಂದೆ ಹೋಗಿ ತಮ್ಮದೇ ಶೈಲಿ...