ಸರ್ಕಾರಿ ಶಾಲೆ ಮಕ್ಕಳಿಗಾಗಿ ಸ್ವಲ್ಪ ಓದು, ಸ್ವಲ್ಪ ಮೋಜು..ಎಂಬ ವಿನೂತನ ಯೋಜನೆ
April 2, 2017 children, , ಸ್ವಲ್ಪ ಓದು , ಸ್ವಲ್ಪ ಮೋಜು ಬೆಂಗಳೂರು,ಏ.2- ಎ ಲ್ಲಾ ಮಕ್ಕಳನ್ನೂ ಮೂಲ ವಿಜ್ಞಾನ ಹಾಗೂ ಸ್ಪರ್ಧಾತ್ಮಕ ಯುಗಕ್ಕೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಸ್ವಲ್ಪ ಓದು, ಸ್ವಲ್ಪ ಮೋಜು ಎಂಬ ವಿನೂತನ ಯೋಜನೆಯನ್ನು ಇಲಾಖೆ ಆರಂಭಿಸಿದೆ. 5ರಿಂದ 6ನೇ ತರಗತಿವರೆಗಿನ ಮಕ್ಕಳಿಗೆ ಬೇಸಿಗೆ ರಜೆಯಲ್ಲಿ ಭಾಷೆ, ಗಣಿತ, ವಿಜ್ಞಾನ ಸೇರಿದಂತೆ ಮತ್ತಿತರ ವಿಷಯಗಳಲ್ಲಿ ತರಬೇತಿ ನೀಡುವುದಕ್ಕಾಗಿ ಈ ಯೋಜನೆಯನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಆಯೋಜಿಸಿದೆ. ಏಪ್ರಿಲ್ ತಿಂಗಳ ಮೊದಲ ವಾರದಿಂದ ಮೇ ತಿಂಗಳ ಕೊನೆಯ ವಾರದವರೆಗೂ ಈ ಶಿಬಿರ ರಾಜ್ಯದ ಎಲ್ಲ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪ್ರಾರಂಭವಾಗಲಿದ್ದು, ಭಾಗವಹಿಸುವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟವನ್ನು ನೀಡಲಾಗುವುದು. ವಿಶೇಷವಾಗಿ ಬರಪೀಡಿತ ತಾಲ್ಲೂಕುಗಳಲ್ಲಿ ಇದಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಬೇಸಿಗೆ ಸಂದರ್ಭದಲ್ಲಿ ಮಕ್ಕಳು ಸಮಯವನ್ನು ವ್ಯರ್ಥ ಮಾಡದೆ ಜ್ಞಾನವೃದ್ದಿಸಿಕೊಳ್ಳಲು ಸರ್ಕಾರ ಇಂತಹ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಸಾಮಾನ್ಯವಾಗಿ ಬೇಸಿಗೆ ದಿನಗಳಲ್ಲಿ ಮಕ್ಕಳು ಆಟಗಳಲ್ಲೇ ಹೆಚ್ಚು ಆಸಕ್ತಿ ವಹಿಸುತ್ತಿದ್ದರು. ಇದರಿಂದ ಅವರ ವಿದ್ಯಾಭ್ಯಾಸ ಕುಂಠಿತವಾಗುತ್ತಿತ್ತು. ಅಲ್ಲದೆ ಖಾಸಗಿ ಶಾಲೆಗಳು ಕೆಲವೇ ದಿನಗಳು ಮಾತ್ರ ರಜೆ ನೀಡಿ ಮಕ್ಕಳಿಗೆ ಬೇಸಿಗೆ ಶಿಬಿರವನ್ನು ಆಯ